ಕೊರನಾದಿಂದ ಮುಕ್ತಿ ಕಾಣದ ಜನತೆ

ನವದೆಹಲಿ. ಅಕ್ಟೋಬರ್ ೩೧. ದೇಶದಲ್ಲಿ ಕೊರೋನಾ ಮಹಾಮಾರಿಯ ಉಪಟಳ ಸದ್ಯಕ್ಕೆ ಅಂತ್ಯವಾಗುವ ಲಕ್ಷಣಗಳು ಕಂಡುಬರುತ್ತಿಲ್ಲ. ಜನರಲ್ಲಿನ ಆತಂಕಕ್ಕೆ ಮುಕ್ತಿಯೆಂಬುದು ಕಾಣದಂತಾಗಿದೆ.ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೮ ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ ೮೧ ಲಕ್ಷ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಬೆಳಗ್ಗೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೮ ಸಾವಿರದ ೨೬೮ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ೫೫೧ ಸೋಂಕಿತರು ಸಾವನ್ನಪ್ಪಿದ್ದಾರೆ. ಪ್ರಸ್ತುತ ದೇಶದಲ್ಲಿ ೮೧ ಲಕ್ಷದ ೩೭ ಸಾವಿರದ ೧೧೯ ಸೋಂಕು ಪ್ರಕರಣಗಳು ದಾಖಲಾಗಿವೆ.

ಕಳೆದ ಕೆಲವು ದಿನಗಳಿಂದ ದೇಶದಲ್ಲಿ ೫೦ ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ದಾಖಲಾಗಿತ್ತು. ಕಳೆದ ಎರಡು ಮೂರು ದಿನಗಳಿಂದ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಏರುಮುಖ ಕಂಡುಬಂದಿದ್ದು, ಗುರುವಾರ ಪತ್ತೆಯಾದ ಸೋಂಕಿತರ ಸಂಖ್ಯೆ ಗಿಂತ ನಿನ್ನೆ ದಾಖಲಾಗಿರುವ ಸೋಂಕಿತರ ಸಂಖ್ಯೆ ಕಡಿಮೆ ಎನ್ನಬಹುದಾಗಿದೆ. ನಿನ್ನೆ ೪೮ ಸಾವಿರದ ೬೪೮ ಸೋಂಕು ಪ್ರಕರಣಗಳು ದಾಖಲಾಗಿದ್ದರೆ, ಇಂದು ಸ್ವಲ್ಪಮಟ್ಟಿಗೆ ಕಡಿಮೆ ಯಾಗಿದೆ.

ದೇಶದಲ್ಲಿ ಸೋಂಕಿನಿಂದ ಗುಣಮುಖರ ವಾಗುತ್ತಿರುವ ಪ್ರಮಾಣವು ದಿನೇ ದಿನೇ ಹೆಚ್ಚಾಗುತ್ತಿದೆ ೭೦ ಲಕ್ಷಕ್ಕೂ ಅಧಿಕ ಸೋಂಕಿತರು ಚೇತರಿಸಿಕೊಂಡು ಮನೆಗಳಿಗೆ ತೆರಳಿರುವುದು ಸಮಾಧಾನ ತರುವ ವಿಚಾರವಾಗಿದೆ. ೭೪ಲಕ್ಷದ ೩೨ ಸಾವಿರದ ೮೨೯ ಸೋಂಕಿತರು ಇದುವರೆಗೂ ಗುಣಮುಖರಾಗಿದ್ದಾರೆ. ನಿನ್ನೆ ಒಂದೂರಿನ ೫೯ ಸಾವಿರದ ೪೫೪ ರೋಗಿಗಳು ಗುಣಮುಖರಾಗಿದ್ದಾರೆ.

ದೇಶದಲ್ಲಿ ಗುಣಮುಖ ಪ್ರಮಾಣ ಶೇಕಡಾ ೯೧. ೩೪ ರಷ್ಟಿದೆ.
ಇನ್ನೊಂದೆಡೆ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಪ್ರಸ್ತುತ ದೇಶದಲ್ಲಿ ೫ ಲಕ್ಷದ ೮೨ ಸಾವಿರದ ೬೪೯ ಸಕ್ರಿಯ ಪ್ರಕರಣಗಳಿದ್ದು ಸಂಬಂಧಿತ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಸಾಂಕ್ರಾಮಿಕ ರೋಗದಿಂದ ಅತಿ ಹೆಚ್ಚು ಬಳಲುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ಇದರ ಜೊತೆಗೆ ದೆಹಲಿ ಮಹಾರಾಷ್ಟ್ರ ಕೇರಳ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಒಂದು ಕಾಲಕ್ಕೆ ಮಹಾರಾಷ್ಟ್ರ ಕೋವಿಡ್ ೧೯ ರ ಹಾಟ್ಸ್ಪಾಟ್ ಆಗಿದ್ದು, ಈಗ ಸ್ವಲ್ಪಮಟ್ಟಿಗೆ ಕೋರೋಣ ಅಬ್ಬರ ಕಡಿಮೆಯಾದಂತೆ ಕಂಡುಬರುತ್ತಿದೆ.

ಮತ್ತೊಂದೆಡೆ ದೆಹಲಿಯಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಐದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಕಳೆದ ಬುಧವಾರದಿಂದ ಈಚೆಗೆ ಹೆಚ್ಚು ಕಡಿಮೆ ಇದೇ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಮುಂದುವರೆದಿದೆ.

ವಿಶ್ವದ ಅತಿ ಹೆಚ್ಚು ಬಾಧಿತ ರಾಷ್ಟ್ರಗಳ ಪೈಕಿ ಭಾರತ ಎರಡನೇ ಸ್ಥಾನದಲ್ಲಿ ಮುಂದುವರೆದಿದೆ. ಜಾಗತಿಕವಾಗಿ ೪೫ ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ತಗಲಿದೆ. ಇದುವರೆಗೂ ೧೧ ಲಕ್ಷದ ೮೮ ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.