ಕೊರೊನಾ:ಇಂದು 2975 ಜನರಿಗೆ ಸೊಂಕು ,21 ಸಾವು

ಬೆಂಗಳೂರು, ಮಾ.30- ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆ ಜೊತೆಗೆ ಸಾವಿನ ಸಂಖ್ಯೆಯು ಏರುಮುಖ ವಾಗುತ್ತಿದೆ. ಕೊರೋನಾಗೆ ಬಲಿಯಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಕ್ರಿಯ ಪ್ರಕರಣಗಳು 25ಸಾವಿರ ಗಡಿದಾಟಿದೆ.
ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 21 ಸೋಂಕಿತ ರು ಮೃತಪಟ್ಟಿದ್ದು, ಬೆಂಗಳೂರು ನಗರ ದಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಮೈಸೂರಿನಲ್ಲಿ ಮೂವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಬ್ಬರು ಚಿಕ್ಕಮಗಳೂರು ,ಕಲಬುರಗಿ, ಹಾಸನದಲ್ಲಿ ,ಮಂಡ್ಯ ಹಾಗೂ ಬೀದರ್ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿತರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಮರಣ ಸಂಭವಿಸಿಲ್ಲ.

ಇಂದು ರಾಜ್ಯದಲ್ಲಿ 2975 ಜನರಿಗೆಸೊಂಕು ದೃಢ ಪಟ್ಟಿದೆ. ಇಂದು1262 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೆಯೇ 21 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ992779ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು954678 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 25541 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 12541 ಜನ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ 240 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 1984 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿನ ಸಂಖ್ಯೆ 431899ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಕಳೆದ24ಗಂಟೆಗಳಲ್ಲಿ ಸೊಂಕಿಗೆ 11,ಸೋಂಕಿತರು ಬಲಿಯಾಗಿದ್ದು , ಒಟ್ಟಾರೆ ಸಾವಿನ ಸಂಖ್ಯೆ4601ಕ್ಕೆ ಏರಿಕೆಯಾಗಿದೆ.
ಇಂದು650 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ409715 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟ17582 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 04, ಬಳ್ಳಾರಿ 48, ಬೆಳಗಾವಿ 19, ಬೆಂಗಳೂರು ಗ್ರಾಮಾಂತರ 66, ಬೀದರ್ 102, ಚಾಮರಾಜನಗರ 03, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 14, ಚಿತ್ರದುರ್ಗ 19, ದಕ್ಷಿಣ ಕನ್ನಡ 47, ದಾವಣಗೆರೆ 09, ಧಾರವಾಡ 24, ಗದಗ 14, ಹಾಸನ 57, ಹಾವೇರಿ 00, ಕಲಬುರಗಿ 156, ಕೊಡಗು 01, ಕೋಲಾರ 21, ಕೊಪ್ಪಳ 15, ಮಂಡ್ಯ 34, ಮೈಸೂರು 111, ರಾಯಚೂರು 12, ರಾಮನಗರ 13, ಶಿವಮೊಗ್ಗ 32, ತುಮಕೂರು 43, ಉಡುಪಿ 53, ಉತ್ತರ ಕನ್ನಡ 40, ವಿಜಯಪುರ 15, ಯಾದಗಿರಿ 07.