ಕೊರೊನಾ:ಇಂದು 6955 ಜನರಿಗೆ ಸೊಂಕು; 36 ಸಾವು

ಬೆಂಗಳೂರು, ಏ. 10- ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹಲವು ದಿನಗಳಿಂದ ಏರಿಕೆಯಾಗುತ್ತಿದ್ದು ಇಂದು ಸೋಂಕಿತರ ಸಂಖ್ಯೆ ನಿನ್ನೆ ಗಿಂತ ಕಡಿಮೆ ಇದ್ದರೂ ಹೊಸ ಸೋಂಕು ಪ್ರಕರಣಗಳು ಏಳು ಸಾವಿರದ ಸನಿಹದಲ್ಲಿದೆ. ಹಾಗೆಯೇ ಬೆಂಗಳೂರಿನಲ್ಲಿ ಸೋಂಕು ಪ್ರಕರಣಗಳು 4500ರ ಸಮೀಪದಲ್ಲಿದೆ

ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 36 ಸೋಂಕಿತ ರು ಮೃತಪಟ್ಟಿದ್ದು, ಬೆಂಗಳೂರು ನಗರ ದಲ್ಲಿ 19 ಮಂದಿ ಮೃತಪಟ್ಟಿದ್ದಾರೆ ಮೈಸೂರು ನಗರದಲ್ಲಿ ಐವರು ಕೊರೋನಾ ಕಾರಣದಿಂದ ಸಾವನ್ನಪ್ಪಿದ್ದಾರೆ. ಹಾಗೆಯೇ ಬೀದರ್, ಧಾರವಾಡ, ತುಮಕೂರು, ಹಾಗೂ ಕಲ್ಬುರ್ಗಿಯಲ್ಲಿ ತಲಾ ಇಬ್ಬರು , ಬಳ್ಳಾರಿ, ಚಾಮರಾಜನಗರ, ಹಾಸನ ಹಾಗೂ ಉತ್ತರ ಕನ್ನಡದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಮರಣ ಸಂಭವಿಸಿಲ್ಲ

ಇಂದು ರಾಜ್ಯದಲ್ಲಿ 6955 ಜನರಿಗೆಸೊಂಕು ದೃಢ ಪಟ್ಟಿದೆ. ಇಂದು3350 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೆಯೇ 36 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ1055040ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು980519 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 61653 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 12849 ಜನ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ 405 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 4384 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿನ ಸಂಖ್ಯೆ 474398ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಕಳೆದ24ಗಂಟೆಗಳಲ್ಲಿ ಸೊಂಕಿಗೆ 19ಸೋಂಕಿತರು ಬಲಿಯಾಗಿದ್ದು , ಒಟ್ಟಾರೆ ಸಾವಿನ ಸಂಖ್ಯೆ4788ಕ್ಕೆ ಏರಿಕೆಯಾಗಿದೆ.
ಇಂದು2027 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ424746 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟ44863 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 44, ಬಳ್ಳಾರಿ 62, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 152, ಬೀದರ್ 215, ಚಾಮರಾಜನಗರ 35, ಚಿಕ್ಕಬಳ್ಳಾಪುರ 74, ಚಿಕ್ಕಮಗಳೂರು 36, ಚಿತ್ರದುರ್ಗ 59, ದಕ್ಷಿಣ ಕನ್ನಡ 137, ದಾವಣಗೆರೆ 49, ಧಾರವಾಡ 88, ಗದಗ 17, ಹಾಸನ 100, ಹಾವೇರಿ 16, ಕಲಬುರಗಿ 276, ಕೊಡಗು 20, ಕೋಲಾರ 121, ಕೊಪ್ಪಳ 28, ಮಂಡ್ಯ 119, ಮೈಸೂರು 266, ರಾಯಚೂರು 30, ರಾಮನಗರ 72, ಶಿವಮೊಗ್ಗ 47, ತುಮಕೂರು 206, ಉಡುಪಿ 68, ಉತ್ತರ ಕನ್ನಡ 64, ವಿಜಯಪುರ 71, ಯಾದಗಿರಿ 24.