ಕೊರೊನಾಗೆ ಯೋಗೇಶ್ ಬಲಿ

ಮೈಸೂರು:ಏ:25: ತಾಂಡವಪುರ ಜಿಪಂ ಸದಸ್ಯೆ ಮಹದೇವಮ್ಮ ಜವರಾಯಿ ಅವರ ಪುತ್ರ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೆಂಪಿಸಿದ್ದನಹುಂಡಿ ಗ್ರಾಪಂ ಸದಸ್ಯ ಯೋಗೇಶ್ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲೇ ಶನಿವಾರ ನೆರವೇರಿತು.
ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಂಡವಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯರಾದ ಮಹದೇವಮ್ಮ ಜವರೇಗೌಡರ ಪುತ್ರ ಯುವ ಮುಖಂಡ ಯೋಗೇಶ್ ಅವರ ಅಕಾಲಿಕ ಮರಣದ ಸುದ್ದಿ ತಿಳಿದು ಮನಸ್ಸಿಗೆ ಬೇಸರವಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.