ಕೊರೊನಾಗೆ 30 ಲಕ್ಷಕ್ಕೂ ಹೆಚ್ಚು ಮಂದಿ ಬಲಿ

ನವದೆಹಲಿ, ಜು.೨೧- ದೇಶದಲ್ಲಿ ಕೊರೊನಾ ಸೋಂಕಿನ ಸೂಕ್ತ ಚಿಕಿತ್ಸೆ ದೊರೆಯದೆ ಸರಿಸುಮಾರು ೩೦ ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನುವ ಆಘಾತಕಾರಿ ಸಂಗತಿ ಹೊರಬಿದ್ದಿದೆ.
ಸರ್ಕಾರ ತೋರಿಸುತ್ತಿರುವ ಅಂಕಿಸಂಖ್ಯೆಗಳಿಗಿಂತ ಹತ್ತು ಪಟ್ಟು ಹೆಚ್ಚು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದು ದೇಶದ ಇತಿಹಾಸದಲ್ಲಿ ಅತಿ ದೊಡ್ಡ ದುರಂತ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.
೨೦೨೦ ರ ಜನವರಿಯಿಂದ ೨೦೨೧ರ ಜೂನ್ ಅವಧಿಯಲ್ಲಿ ಸರಿಸುಮಾರು ೩೪ ಲಕ್ಷದಿಂದ ೪೭ ಲಕ್ಷ ಮಂದಿ ಕೊರೊನಾ ಸೋಂಕಿನಿಂದ ದೇಶದಲ್ಲಿ ಸಾವನ್ನಪ್ಪಿದ್ದಾರೆ ಸರ್ಕಾರ ನೀಡಿರುವ ಅಂಕಿ-ಅಂಶಗಳ ಗಿಂತ ಇದು ಅತ್ಯಧಿಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೊದಲ ಅವಧಿಯ ಸರ್ಕಾರದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದ ಅರವಿಂದ್ ಸುಬ್ರಮಣಿಯನ್ ನೇತೃತ್ವದಲ್ಲಿ ನಡೆದ ಸಮೀಕ್ಷೆಯಲ್ಲಿ ಮಾಹಿತಿ ಬಹಿರಂಗ ಪಡಿಸಲಾಗಿದೆ.
ದೇಶದಲ್ಲಿ ಮೊದಲ ಅಲೆ ಮತ್ತು ಎರಡನೇ ಅಲೆಯಲ್ಲಿ ಸೋಂಕಿನಿಂದ ಅತಿ ಹೆಚ್ಚಿನ ಜನರು ಸೂಕ್ತ ಚಿಕಿತ್ಸೆ, ಸೌಲಭ್ಯ ಸಿಗದೆ ಮೃತಪಟ್ಟಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೋಂಕಿನಿಂದ ಮೃತಪಡುತ್ತಿರುವ ಸಂಖ್ಯೆಯನ್ನು ಮರೆಮಾಚಿ ಕಡಿಮೆ ಸಂಖ್ಯೆಯ ಲೆಕ್ಕ ತೋರಿಸುತ್ತಿವೆ ಎಂದು ಹೇಳಲಾಗಿದೆ.
ಮೊದಲ ಅಲೆಗಿಂತ ಎರಡನೇ ಅಲೆ ಅತ್ಯಂತ ಅಪಾಯಕಾರಿಯಾಗಿದ್ದು ಹೆಚ್ಚಿನ ಜನರು ಆಮ್ಲಜನಕ ಸಿಗದೇ ಪ್ರಾಣ ಕಳೆದುಕೊಂಡಿದ್ದಾರೆ ಅಲ್ಲದೆ ಸೂಕ್ತ ಚಿಕಿತ್ಸೆ ದೊರಕದೆ ಜನರು ಮೃತಪಟ್ಟರೂ ಸರ್ಕಾರಗಳು ಸರಿಯಾದ ಲೆಕ್ಕ ನೀಡುವಲ್ಲಿ ಹಿಂದೇಟು ಹಾಕಿದೆ ಎಂದು ಸಮೀಕ್ಷೆ ತಿಳಿಸಿದೆ.
ದೇಶದಲ್ಲಿ ೧೪೦ ಕೋಟಿ ಜನಸಂಖ್ಯೆ ಹೊಂದಿದ್ದು ಇದುವರೆಗೂ ಮೂರು ಕೋಟಿಗೂ ಹೆಚ್ಚು ಮಂದಿಗೆ ಸೋಂಕು ಕಾಣಿಸಿಕೊಂಡಿದೆ ೪.೧೮ ಲಕ್ಷ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರದ ಅಂಕಿಅಂಶಗಳು ತಿಳಿಸುತ್ತವೆ ಆದರೆ ಈ ಸಂಖ್ಯೆ ಹೆಚ್ಚಿದೆ ಎಂದು ಹೇಳಲಾಗಿದೆ.
ರಾಜ್ಯ ಸರಕಾರಗಳು ಕೊರೊನಾ ಸೋಂಕಿನಿಂದ ಮೃತಪಟ್ಟ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಈ ಸಂಖ್ಯೆಯ ಬಗ್ಗೆ ಅಂತರಾಷ್ಟ್ರೀಯ ಸಂಸ್ಥೆ ಮನೆಮನೆ ಅಧ್ಯಯನದ ಮೂಲಕ ಈ ವಿಷಯ ಬಹಿರಂಗ ಪಡಿಸಿದೆ.
ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಕೇವಲ ಸಾವಿರಾರು ಲಕ್ಷ ಅಲ್ಲ ಈ ಸಂಖ್ಯೆ ಸರಕಾರ ನೀಡಿರುವ ಮಾಹಿತಿಗಿಂತ ಹತ್ತು ಪಟ್ಟು ಹೆಚ್ಚಾಗಿದೆ ಎಂದುಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಈ ಹಿಂದೆ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೆಲಸ ಮಾಡಿದ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಮಾಹಿತಿ ನೀಡಿದ್ದಾರೆ.
ಎರಡನೆಯ ಅಲೆಯ ಸಮಯದಲ್ಲಿ ಬಹುತೇಕ ಜನರು ಆಮ್ಲಜನಕದ ಕೊರತೆ ಹಾಸಿಗೆ ಮತ್ತು ಲಸಿಕೆ ಔಷಧ ಸಿಗದೆ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ.
ಅರವಿಂದ ಸುಬ್ರಹ್ಮಣಿಯನ್ ನೇತೃತ್ವದಲ್ಲಿ ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಸಮೀಕ್ಷೆಯಲ್ಲಿ ಈ ವಿಷಯವನ್ನು ಬಹಿರಂಗ ಪಡಿಸಲಾಗಿದೆ.
ಸಮೀಕ್ಷೆಯಲ್ಲಿ ಅಭಿಷೇಕ್ ಆನಂದ್ ಜಸ್ಟಿನ್ ಸೆಂಡರ್ ಫಾರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಅವಧಿಯ ಸರ್ಕಾರದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದ ಅರವಿಂದ ಸುಬ್ರಹ್ಮಣ್ಯಂ ಅವರು ನಡೆಸಿದ ಸಮೀಕ್ಷೆಯಲ್ಲಿ ಈ ಮಾಹಿತಿಯನ್ನು ಅವರ ಹಾಕಿರುವುದು ಕೇಂದ್ರ ಸರ್ಕಾರಕ್ಕೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಕೊರೊನಾ ಸೋಂಕಿನಿಂದ ದೇಶದಲ್ಲಿ ೩೦ ಲಕ್ಷಕ್ಕೂ ಅಧಿಕ ಮಂದಿ ಸಾವು

ಸಾವಿನ ಸಂಖ್ಯೆ ಮುಚ್ಚುತ್ತಿರುವ ಕೇಂದ್ರ ರಾಜ್ಯ ಸರ್ಕಾರಗಳು

ನೀಡಿರುವ ಸಾವಿನ ವರದಿಗಿಂತ ಶೇಕಡ ಹತ್ತುಪಟ್ಟು ಹೆಚ್ಚಳ ಸಮೀಕ್ಷೆ ಬಹಿರಂಗ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೊದಲ ಅವಧಿಯಲ್ಲಿ ಆರ್ಥಿಕ ಸಲಹೆಗಾರರಾಗಿದ್ದ ಅರವಿಂದ ಸುಬ್ರಹ್ಮಣ್ಯಂ ನೇತೃತ್ವದ ಸಮೀಕ್ಷೆ ಬಹಿರಂಗ

ಹಾಸಿಗೆ ಆಮ್ಲಜನಕ ಚಿಕಿತ್ಸೆ ಸಿಗದೆ ಬಹುತೇಕ ಸೋಂಕಿತರ ಸಾವು

ದೇಶದ ಇತಿಹಾಸದಲ್ಲಿ ಇದೊಂದು ಕರಾಳ ಅಧ್ಯಾಯ