ಕೊರೊನಾದಿಂದ ಮೃತಪಟ್ಟರೆ ಪಾಲಿಕೆ ವೆಚ್ಚದಲ್ಲಿ ಅಂತ್ಯಸಂಸ್ಕಾರ

ಮಂಗಳೂರು, ಎ.೨೨- ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರದ ವೆಚ್ಚವನ್ನು ಪಾಲಿಕೆ ಭರಿಸಲಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಾಲಿಕೆಯ ವ್ಯಾಪ್ತಿಯಲ್ಲಿ ೨ ವಿದ್ಯುತ್ ಚಿತಾಗಾರಗಳಿವೆ. ತಾಂತ್ರಿಕ ಕಾರಣದಿಂದ ಬೋಳೂರಿನ ಚಿತಾಗಾರ ಕಾರ್ಯ ನಿರ್ವಹಿಸುತ್ತಿಲ್ಲ. ಅಲ್ಲಿ ಕಟ್ಟಿಗೆಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯುತ್ತಿದೆ. ಇದಕ್ಕೆ ೮ ಸಾವಿರ ರೂ. ದರವಿದ್ದುದನ್ನು ೫,೫೦೦ ರೂ.ಗೆ ಇಳಿಕೆ ಮಾಡಲಾಗಿದೆ. ಆದರೆ ಕೋವಿಡ್ ಸಾವಿನ ಸನ್ನಿವೇಶಗಳಲ್ಲಿ ದುಪ್ಪಟ್ಟು ಹಣ ಕೇಳುತ್ತಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮೈಸೂರು ಇಲೆಕ್ಟ್ರಿಕಲ್ ಲಿ.ನ ಅಧ್ಯಕ್ಷ ಸಂತೋಷ್ ರೈ ಬೋಳಿಯಾರು, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಜೀ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ, ಮಂಗಳೂರು ನಗರ ದಕ್ಷಿಣ ಮಂಡಲ ಬಿಜೆಪಿ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಲೀಲಾವತಿ ಪ್ರಕಾಶ್, ಸಂದೀಪ್ ಗರೋಡಿ, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯರಾದ ದಿವಾಕರ್ ಪಾಂಡೇಶ್ವರ, ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಶಕಿಲಾ ಕಾವಾ, ಮನೋಹರ್ ಶೆಟ್ಟಿ, ಶೈಲೇಶ್ ಶೆಟ್ಟಿ ಅತ್ತಾವರ, ಭರತ್, ಗಣೇಶ್ ಕುಲಾಲ್, ವೀಣಾ ಮಂಗಲ, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಭಾಸ್ಕರ್‌ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ ಡಿ. ಬಂಗೇರ, ಸುರೇಂದ್ರ ಜಪ್ಪಿನಮೊಗರು, ಬಿಜೆಪಿ ಮುಖಂಡರಾದ ಮೋನಪ್ಪಭಂಡಾರಿ, ಡಾ. ಅಣ್ಣಯ್ಯ ಕುಲಾಲ್, ಸಂಜಯ್ ಪ್ರಭು, ಜಿತೇಂದ್ರ ಕೊಟ್ಟಾರಿ, ಡಾ. ಜಿ.ಕೆ ಭಟ್, ಸುಜನ್‌ದಾಸ್ ಕುಡುಪು, ರಘು ಸಾಲ್ಯಾನ್, ಜಮಾಲ್, ನೀರಜ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.