ಕೊರೊನಾ ಇಂದು ಏರಿಕೆ,2886 ಜನರಿಗೆ ಸೋಂಕು, 8 ಸಾವು

ಬೆಂಗಳೂರು, ಮಾ.27- ರಾಜ್ಯದಲ್ಲಿ ಇಂದೂ ಕೊರೊನಾ ಬಾರಿ ಏರಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ 8 ಮಂದಿ ಸೋಂಕಿತರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಇಂದು ಹೊಸ ಸೋಂಕು ಪ್ರಕರಣಗಳು ರಾಜ್ಯದಲ್ಲಿ ಮೂರು ಸಾವಿರ ಸನಿಹ ಬಂದಿದೆ.
ಬೆಂಗಳೂರು ನಗರದಲ್ಲಿ ಹೊಸ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಹೊಸ ಪ್ರಕರಣಗಳು ಎರಡು ಸಾವಿರದ ಹತ್ತಿರ ಬಂದು ನಿಂತಿದೆ.

ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 8 ಸೋಂಕಿತ ರು ಮೃತಪಟ್ಟಿದ್ದು ಬೆಂಗಳೂರು ನಗರ ದಲ್ಲಿ2 ಮಂದಿ ಕಲ್ಬುರ್ಗಿಯಲ್ಲಿ ಇಬ್ಬರು ಪಟ್ಟಿದ್ದಾರೆ ಬೀದರ್, ಧಾರವಾಡ, ಹಾಸನ, ಹಾಗು ತುಮಕೂರು ತಲಾ ಒಬ್ಬರು ಕೊರನಾದಿಂದ ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಮರಣ ಸಂಭವಿಸಿಲ್ಲ.
ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21 ಸಾವಿರ ಗಡಿದಾಟಿದೆ.

ಇಂದು ರಾಜ್ಯದಲ್ಲಿ2886 ಜನರಿಗೆಸೊಂಕು ದೃಢ ಪಟ್ಟಿದೆ. ಇಂದು1179ಸೋಂಕಿತರು ಗುಣಮುಖರಾಗಿದ್ದಾರೆ ಹಾಗೆಯೇ 8 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ983930ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು950167 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 21252 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 12492 ಜನ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ 196 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 1820 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 426169ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಕಳೆದ24ಗಂಟೆಗಳಲ್ಲಿ ಸೊಂಕಿಗೆ 2 ಸೋಂಕಿತರು ಬಲಿಯಾಗಿದ್ದು , ಬೆಂಗಳೂರಿನಲ್ಲಿ ಒಟ್ಟಾರೆ ಸಾವಿನ ಸಂಖ್ಯೆ4574ಕ್ಕೆ ಏರಿಕೆಯಾಗಿದೆ.
ಇಂದು474ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ406923 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟು14671 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 11, ಬಳ್ಳಾರಿ 21, ಬೆಳಗಾವಿ 16, ಬೆಂಗಳೂರು ಗ್ರಾಮಾಂತರ 58, ಬೀದರ್82, ಚಾಮರಾಜನಗರ 07, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 40, ಚಿತ್ರದುರ್ಗ 09, ದಕ್ಷಿಣ ಕನ್ನಡ 39, ದಾವಣಗೆರೆ 04, ಧಾರವಾಡ 41, ಗದಗ 13, ಹಾಸನ 43, ಹಾವೇರಿ 02, ಕಲಬುರಗಿ 147, ಕೊಡಗು 07, ಕೋಲಾರ 33, ಕೊಪ್ಪಳ 06, ಮಂಡ್ಯ 16, ಮೈಸೂರ 131, ರಾಯಚೂರು 10, ರಾಮನಗರ 05, ಶಿವಮೊಗ್ಗ 15, ತುಮಕೂರು 80, ಉಡುಪಿ156, ಉತ್ತರ ಕನ್ನಡ 14, ವಿಜಯಪುರ 41, ಯಾದಗಿರಿ 09.