ಕೊರೊನಾ ಇಂದು ಭಾರಿ ಏರಿಕೆ: 4991ಜನರಿಗೆ ಸೋಂಕು, 6 ಸಾವು

ಬೆಂಗಳೂರು, ಏ.2- ರಾಜ್ಯದಲ್ಲಿ ಇಂದೂ ಕೊರೊನಾ ಭಾರಿ ಏರಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ ಹೊಸ ಸೋಂಕು ಪ್ರಕರಣಗಳು ಐದು ಸಾವಿರ ಹತ್ತಿರ ಬಂದಿವೆ. ರಾಜಧಾನಿ ಬೆಂಗಳೂರು ನಗರದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು ಹೊಸ ಸೋಂಕು ಪ್ರಕರಣಗಳ ಸಂಖ್ಯೆ ನಾಲ್ಕು ಸಾವಿರ ಸನಿಹದಲ್ಲಿದೆ. ಇಂದು ಸಾವಿಗೀಡಾಗಿರುವ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ 6 ಮಂದಿ ಸೋಂಕಿತರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 6ಸೋಂಕಿತ ರು ಮೃತಪಟ್ಟಿದ್ದು ಬೆಂಗಳೂರು ನಗರದಲ್ಲಿ 5 ,ಕಲ್ಬುರ್ಗಿಯಲ್ಲಿ ಒಬ್ಬರು ಕೊರನಾದಿಂದ ಮೃತಪಟ್ಟಿದ್ದಾರೆ
ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಮರಣ ಸಂಭವಿಸಿಲ್ಲ.
ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 34 ಸಾವಿರ ಗಡಿದಾಟಿದೆ. ಇಂದು ರಾಜ್ಯದಲ್ಲಿ4991 ಜನರಿಗೆಸೊಂಕು ದೃಢ ಪಟ್ಟಿದೆ.
ಇಂದು1631ಸೋಂಕಿತರು ಗುಣಮುಖರಾಗಿದ್ದಾರೆ ಹಾಗೆಯೇ 6 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ1006229ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು959400 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 34219 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 12591 ಜನ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ 269 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 3509ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 441242ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಕಳೆದ24ಗಂಟೆಗಳಲ್ಲಿ ಸೊಂಕಿಗೆ 5 ಸೋಂಕಿತರು ಬಲಿಯಾಗಿದ್ದು , ಬೆಂಗಳೂರಿನಲ್ಲಿ ಒಟ್ಟಾರೆ ಸಾವಿನ ಸಂಖ್ಯೆ4635ಕ್ಕೆ ಏರಿಕೆಯಾಗಿದೆ.
ಇಂದು693ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ412006 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟು24600 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 13, ಬಳ್ಳಾರಿ 34, ಬೆಳಗಾವಿ 35, ಬೆಂಗಳೂರು ಗ್ರಾಮಾಂತರ 69, ಬೀದರ್ 126, ಚಾಮರಾಜನಗರ 13, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 47, ಚಿತ್ರದುರ್ಗ 22, ದಕ್ಷಿಣ ಕನ್ನಡ 105, ದಾವಣಗೆರೆ 21, ಧಾರವಾಡ 62, ಗದಗ 16, ಹಾಸನ 102, ಹಾವೇರಿ 08, ಕಲಬುರಗಿ 105, ಕೊಡಗು 03, ಕೋಲಾರ 74, ಕೊಪ್ಪಳ 06, ಮಂಡ್ಯ 58, ಮೈಸೂರು 174, ರಾಯಚೂರು 27, ರಾಮನಗರ 05, ಶಿವಮೊಗ್ಗ 37, ತುಮಕೂರು 142, ಉಡುಪಿ 95, ಉತ್ತರ ಕನ್ನಡ 25, ವಿಜಯಪುರ 30, ಯಾದಗಿರಿ 18.