“ಕೊರೊನಾ ಕಲಿಸಿದ ಪಾಠ” ಕೃತಿ ಬಿಡುಗಡೆ ನಾಳೆ

ಕಲಬುರಗಿ:ಡಿ.26: ಇಲ್ಲಿನ ಕಲಬುರಗಿ ಸಾಂಸ್ಕøತಿಕ ಪ್ರತಿಷ್ಠಾನ ಹಾಗೂ ಶರಣ ಮಾರ್ಗ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪತ್ರಕರ್ತ-ಲೇಖಕ ಡಾ. ಶಿವರಂಜನ್ ಸತ್ಯಂಪೇಟೆ ಸಂಪಾದಿಸಿರುವ “ಕೊರೊನಾ ಕಲಿಸಿದ ಪಾಠ” ಕೃತಿ ಜನಾರ್ಪಣೆ ಕಾರ್ಯಕ್ರಮ ಡಿ.27ರಂದು ಸಂಜೆ 4.30ಕ್ಕೆ ನಗರದ ಕಲಾಮಂಡಳದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಸುರೇಶ ಬಡಿಗೇರ ಹಾಗೂ ಎನ್.ಎಸ್. ಹಿರೇಮಠ ತಿಳಿಸಿದ್ದಾರೆ.

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶಕುಮಾರ ಹೊಸಮನಿ ಕೃತಿ ಜನಾರ್ಪಣೆ ಮಾಡಲಿದ್ದಾರೆ. ಕೃತಿ ಕುರಿತು ನಿವೃತ್ತ ಮುಖ್ಯೋಪಾದ್ಯಾಯರಾದ ಮಹಾದೇವಿ ಪಾಟೀಲ ಮಾತನಾಡಲಿದ್ದಾರೆ. ಸಮಾಜ ಸೇವಕ ಉಮೇಶ ಶೆಟ್ಟಿ, ವಿ.ಜಿ. ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ. ಮಹೇಶ ಗಂವ್ಹಾರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಲಬುರಗಿ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಬಿ.ಎಚ್. ನಿರಗುಡಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.