ಕೊರೊನಾ ಜಾಗೃತಿ: ಎಲ್‌ಇಡಿ ಪ್ರಚಾರ ವಾಹನಕ್ಕೆ ಚಾಲನೆ

ತುಮಕೂರು, ನ. ೧೫- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ವತಿಯಿಂದ ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಎಲ್‌ಇಡಿ ಪ್ರಚಾರ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಹಸಿರು ನಿಶಾನೆ ತೋರಿದರು.
ಇಲ್ಲಿನ ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಹಸಿರು ನಿಶಾನೆ ತೋರಿದ ಎಲ್‌ಇಡಿ ವಾಹನವು ಜಿಲ್ಲೆಯ ಹತ್ತು ತಾಲ್ಲೂಕುಗಳ ಆಯ್ದ ಗ್ರಾಮಗಳಿಗೆ ತೆರಳಿ ಕೊರೊನಾ ಕುರಿತಂತೆ ಜನರಲ್ಲಿ ಅರಿವು ಮೂಡಿಸಲಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್, ಜಿಲ್ಲಾ ಪಂಚಾಯ್ತಿ ಸಿಇಓ ಶುಭಾಕಲ್ಯಾಣ್, ಉಪ ಕಾರ್ಯದರ್ಶಿ ರಮೇಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ, ಸಿಪಿಓ ಬಾಲರಾಜ್, ತೋಟಗಾರಿಕೆ ಉಪನಿರ್ದೇಶಕ ರಘು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ. ಮತ್ತಿತರರು ಉಪಸ್ಥಿತರಿದ್ದರು.