ಕೊರೊನಾ ಜಾಗೃತಿ ಮೂಡಿಸಿದ ಗ್ರಾ.ಪಂ.


ಲಕ್ಷ್ಮೇಶ್ವg,ಮೇ.19: ತಾಲೂಕಿನ ಬಾಲೆಹೊಸೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು. ಉಪಾಧ್ಯಕ್ಷರು. ಸರ್ವ ಸದಸ್ಯರು ಗ್ರಾಮದಲ್ಲಿ ಕೊರೊನಾ ಜಾಗೃತಿ ಮೂಡಿಸಿದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಧ್ವನಿವರ್ಧಕದ ಮೂಲಕ ಮಾಸ್ಕ್ ಧರಿಸಿ ಜೀವ ಉಳಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಸ್ವಚ್ಚತೆಗೆ ಆದ್ಯತೆ ನೀಡಿ ಎಂಬ ಘೋಷಣೆಗಳನ್ನು ಕೂಗಿದರು. ಸೋಂಕಿನ ಲಕ್ಷಣ ಕಂಡುಬಂದರೆ ಕೂಡಲೇ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಔಷಧೋಪಚಾರ ಪಡೆಯಬೇಕೆಂದು ಸೂಚಿಸಿದರು.
ಜಾಗೃತಿ ಅಭಿಯಾನದಲ್ಲಿ, ಪಿ.ಡಿ.ಒ ಬಳುಟಗಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಪಂಚಾಯಿತಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.