ಕೊರೊನಾ ಟೆಸ್ಟ್ ವಿಳಂಬ ಸೋಂಕು ಹೆಚ್ಚಳಕ್ಕೆ ಕಾರಣ

Public Health Lab Assistant Abraham Jimenez receives the specimen the Central Accessioning which is the in-take area to begin the polymerase chain reaction (PCR) test for COVID-19 on March 19, 2020. Jimenez decontaminates the outside of the container, and gives the sample an accession number to coincide with lavatory information system. ( Photo Credit: Los Aneles County )


ನವದೆಹಲಿ,ಏ.೭- ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಲು ಶೀಘ್ರಗತಿಯಲ್ಲಿ ಪರೀಕ್ಷೆ ಮಾಡದಿರುವುದೇ ಪ್ರಮುಖ ಕಾರಣ ಎನ್ನುವ ಸಂಗತಿ ಬೆಳಕಿಗೆ ಬಂದಿದೆ.
ಮುಂದಿನ ದಿನಗಳಲ್ಲಿ ಶೀಘ್ರಗತಿಯಲ್ಲಿ ಸೋಂಕು ಪತ್ತೆ ಪರೀಕ್ಷೆ ಮಾಡಬೇಕು ಇಲ್ಲದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳಲಿದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.
ದೇಶದಲ್ಲಿ ಕೊರೋನೋ ಲಸಿಕೆ ಬಂದ ನಂತರವೂ ಕೊರೋನೋ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದೆ ಪರೀಕ್ಷೆ ಪ್ರಮಾಣವನ್ನು ಹೆಚ್ಚು ಮಾಡುವಂತೆ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸಲಹೆ ನೀಡಿದ್ದಾರೆ.
ಇಂಗ್ಲೆಂಡ್ ಸೇರಿದಂತೆ ವಿವಿಧ ದೇಶಗಳಲ್ಲಿ ಶೇ. ೮ ರಷ್ಟು ಮಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ ಆದರೆ ದಕ್ಷಿಣ ಏಷ್ಯಾದಲ್ಲಿ ಶೇಕಡ ಒಂದರಷ್ಟು ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ. ಹೀಗಾಗಿಯೇ ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ ಸೋಂಕು ಪ್ರಮಾಣ ಹೆಚ್ಚಾಗಲು ಕಾರಣ ಎಂದು ಅವರು ತಿಳಿಸಿದ್ದಾರೆ.
ಭಾನುವಾರ ದೇಶದಲ್ಲಿ ಒಂದು ಲಕ್ಷ ಗಡಿದಾಟಿ ಸೋಂಕು ಕಾಣಿಸಿಕೊಂಡಿತ್ತು ಅದರಲ್ಲಿ ಮಹಾರಾಷ್ಟ್ರ ಒಂದರಲ್ಲಿ ಅರ್ಧದಷ್ಟು ಹೆಚ್ಚು ಇದೆ. ಇಂದು ಮತ್ತೊಮ್ಮೆ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ತಗಲಿದೆ ಇದು ಆತಂಕಕಾರಿ ಬೆಳವಣಿಗೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಮಹಾರಾಷ್ಟ್ರ ಕರ್ನಾಟಕ-ಪಂಜಾಬ್ ಗುಜರಾತ್ ತಮಿಳುನಾಡು ಕೇರಳ, ಚಂದಿಗಡ ಛತ್ತಿಸ್ಗಢ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸೋಂಕು ಸಂಖ್ಯೆ ನಿತ್ಯ ಏರಿಕೆಯಾಗುತ್ತಿದೆ ಇದು ಆತಂಕಕಾರಿ ಬೆಳವಣಿಗೆ ಎಂದು ಅವರು ತಿಳಿಸಿದ್ದಾರೆ.
ಕೊರೊನಾ ಸೋಂಕು ಪತ್ತೆ ಪರೀಕ್ಷೆಯನ್ನು ದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಮಾಡುವ ಮೂಲಕ ಸೋಂಕು ಹರಡುವುದನ್ನು ತಡೆಯುವ ತುರ್ತು ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ