ಕೊರೊನಾ ತೀವ್ರತೆ ಇಳಿಮುಖ

ನವದೆಹಲಿ ಜನವರಿ ೪. ದೇಶಾದ್ಯಂತ ಕೋವಿಡ್-೧೯ ಸಾಂಕ್ರಾಮಿಕ ರೋಗದ ತೀವ್ರತೆ ಇಳಿಮುಖವಾಗುತ್ತಿದ್ದು ಪ್ರತಿನಿತ್ಯ ಹೊಸದಾಗಿ ಪತ್ತೆ ಯಾಗುತ್ತಿರುವ ಸೋಂಕಿತರ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಕಳೆದ ೨೪ ಗಂಟೆಗಳಲ್ಲಿ ಕೇವಲ ಹದಿನಾರು ಸಾವಿರದ ೫೦೫ ಸೋಂಕು ಪ್ರಕರಣಗಳು ದಾಖಲಾಗಿವೆ.
ಇದರೊಂದಿಗೆ ದೇಶದಲ್ಲಿ ಇದುವರೆಗೂ ದಾಖಲಾಗಿರುವ ಸೋಂಕಿತರ ಸಂಖ್ಯೆ ಒಂದು ಕೋಟಿ ಮೂರು ಲಕ್ಷದ ೪೦ ಸಾವಿರದ ನಾನೂರ ೭೦ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇದೇ ಅವಧಿಯಲ್ಲಿ ೨೧೪ ಸೋಂಕಿತರು ಸಾವನ್ನಪ್ಪಿದ್ದು ಇಲ್ಲಿಯತನಕ ಮೃತಪಟ್ಟವರ ಸಂಖ್ಯೆ ಒಂದು ಲಕ್ಷದ ೪೯ ಸಾವಿರದ ೬೪೯ ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. ಇನ್ನೊಂದೆಡೆ ಗುಣಮುಖ ರಪ್ರ ಮಾಣ ಏರಿಕೆಯಾಗುತ್ತಲೇ ಇದೆ. ಇರುವರೆಗೂ ೯೯ ಲಕ್ಷದ ೪೬ ಸಾವಿರದ ೨೬೭ ಸೋಂಕಿತರು ಗುಣಮುಖರಾಗಿದ್ದಾರೆ.
ಸಚಿವಾಲಯ ಇಂದು ಬೆಳಗ್ಗೆ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಚೇತರಿಕೆ ಕಾಣುತ್ತಿರುವ ಸೋಂಕಿತರ ಪ್ರಮಾಣ ಶೇಕಡಾ ೯೬. ೧೯ ರಷ್ಟಿದೆ. ಸಾವಿನ ಪ್ರಮಾಣವೂ ಕಡಿಮೆಯಾಗುತ್ತಿದ್ದು ಈ ಪ್ರಮಾಣ ಶೇಕಡ ೧.೪೫ ರಷ್ಟಿದೆ ಎಂದು ಹೇಳಲಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ ಈಗಲೂ ಮೂರು ಲಕ್ಷಕ್ಕಿಂತ ಕಡಿಮೆ ಇದೆ. ಪ್ರಸ್ತುತ ದೇಶದಲ್ಲಿ ೨ ಲಕ್ಷ ೪೩ ಸಾವಿರದ ೯೫೩ ಸಕ್ರಿಯ ಪ್ರಕರಣಗಳು ದಾಖಲಾಗಿದ್ದು ನಿಗದಿತ ಆಸ್ಪತ್ರೆಗಳಲ್ಲಿ ಸಂಬಂಧಪಟ್ಟವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಈ ನಡುವೆ ಕೋರೋಣ ಸೋಂಕು ತಡೆಗೆ ಅಭಿವೃದ್ಧಿಪಡಿಸಲಾಗಿರುವ ಲಸಿಕೆ ಗಳಾದ ಕೋವಿಶೀಲ್ಡ್ ಹಾಗೂ ಕೋ ವ್ಯಾಕ್ಸಿನ್ ತುತ್ತು ಬಳಕೆಗೆ ಭಾರತದ ಔಷಧ ಮಹಾ ನಿಯಂತ್ರಕರು ಅನುಮೋದನೆ ನೀಡಿದ್ದಾರೆ.
ಇದರಿಂದಾಗಿ ದೇಶದಲ್ಲಿ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳಲು ಅನುವಾಗುವಂತೆ ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ. ಸೇರುಂ ಇನ್ಸ್ಟ್ಯೂಟ್ ಆಫ್ ಇಂಡಿಯಾ ಹಾಗೂ ಭಾರತ್ ಬಯೋಟೆಕ್ ಕಂಪನಿಗಳು ಅಭಿವೃದ್ಧಿಪಡಿಸಿರುವ ಲಸಿಕೆಗಳನ್ನು ದೇಶದಲ್ಲಿ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ.