ಕೊರೊನಾ ತುಸು ಹೆಚ್ಚಳ

ನವದೆಹಲಿ,ಸೆ.೧೪- ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಏರಿಳಿತವಾಗುತ್ತಿದೆ. ನಿನ್ನೆ ಇಳಿಕೆಯಾಗಿದ್ದ ಕೊರೊನಾ ಸೋಂಕು ಸಂಖ್ಯೆ ಇಂದು ಮತ್ತೆ ಏರಿಕೆಯಾಗಿದೆ. ದೇಶದಲ್ಲಿ ಹೊಸದಾಗಿ ೫,೧೦೮ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಸೋಂಕಿನಿಂದ ೫,೬೭೫ ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಕೊರೊನಾ ಸೋಂಕು ಏರಿಳಿತವಾಗುತ್ತಿರುವ ಹಿನ್ನೆಲೆಯಲ್ಲಿ ದಿನದ ಪಾಸಿಟಿವಿಟಿ ಪ್ರಮಾಣ ಶೇ.೧.೪೪ ರಷ್ಟು ಇದ್ದು ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ೪೫,೭೪೯ ಮಂದಿಯಲ್ಲಿ ಇದೆ ಎಂದು ಸಚಿವಾಲಯ ತಿಳಿಸಿದೆ.
ಸೋಂಕಿನಿಂದ ಇದುವರೆಗೂ ಚೇತರಿಸಿಕೊಂಡವರ ಸಂಖ್ಯೆ ೪,೩೯,೩೬,೦೯೨ ಮಂದಿ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಸೋಂಕಿನಿಂದ ಇಲ್ಲಿಯವರೆಗೆ ೫,೨೮,೨೧೬ ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.
ದಿನದ ಪಾಸಿಟಿವಿಟಿ ಪ್ರಮಾಣ ಶೇ.೧.೪೪ರಷ್ಟು ಇದ್ದು ವಾರದ ಸರಾಸರಿ ಪ್ರಮಾಣ ಶೇ.೧.೭೦ ರಷ್ಟು ಹಾಗೂ ಒಟ್ಟಾರೆ ಪಾಸಿಟಿವಿಟಿ ಪ್ರಮಾಣ ಶೇ. ೦.೧೦ ರಷ್ಟು ಇದೆ ಎಂದು ಅಧಿಕೃತ ಮಾಹಿತಿಯಲ್ಲಿ ಈ ವಿಷಯ ತಿಳಿಸಿದೆ. ದೇಶದಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೧೯,೨೫,೮೮೧ ಡೋಸ್ ಲಸಿಕೆ ನೀಡಲಾಗಿದೆ.ಇದರೊಂದಿಗೆ ಇಲ್ಲಿಯ ತನಕ ಒಟ್ಟಾರೆ ೨೧೫,೬೭,೦೬,೫೭೪ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕೊರೊನಾ ಸೋಂಕು ಏರಿಳಿತ ಹಿನ್ನೆಲೆಯಲ್ಲಿ ಸೋಂಕಿನ ಚೇತರಿಕೆ ಒಟ್ಟು ಪ್ರಮಾಣ ಶೇ.೯೮.೭೧ ರಷ್ಟು ಏರಿಕೆಯಾಗಿದೆ. ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೩,೫೫,೨೩೧ ಮಂದಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ. ಜೊತೆಗೆ ಇದುವರೆಗೆ ಒಟ್ಟಾರೆ ೮೯.೦೨ ಕೋಟಿಗೆ ಪರೀಕ್ಷೆ ಮಾಡಲಾಗಿದೆ ಎಂದು ಅಧಿಕೃತ ಮಾಹಿತಿಯಲ್ಲಿ ಈ ವಿಷಯ ತಿಳಿಸಲಾಗಿದೆ.