ಕೊರೊನಾ ನಿಯಂತ್ರಣ ಜಿಲ್ಲಾಡಳಿತ ವಿಫಲ

ಕಲಬುರಗಿ:ಎ.17: ಕಲಬುರಗಿಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಮಹಾಮಾರಿ ಕೊರೊನಾ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಆರೋಪಿಸಿದ್ದಾರೆ.

ಈಗಾಗಲೇ ನಗರದಲ್ಲಿ144 ಕಲಂ ಜಾರಿಗೊಳಿಸಿದರೂ ಜನರು ಗುಂಪು ಗುಂಪಾಗಿ ಓಡಾಡುತ್ತಿದ್ದಾರೆ.ಸಭೆ ಸಮಾರಂಭಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಿದ್ದಾರೆ.ಮಾಲ್ ಗಳಲ್ಲಿಯೂ ಜನಸಂದಣಿ ಕಂಡುಬರುತ್ತಿದೆ.ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಾರ್ವಜನಿಕರು, ವ್ಯಾಪಾರಿಗಳು ಮಾಸ್ಕ್ ಹಾಕದೆ ರಾಜಾರೋಷವಾಗಿ ಸಂಚರಿಸುತ್ತಿದ್ದಾರೆ.ಕೊವೀಡ ನಿಯಮಗಳನ್ನು ಗಾಳಿಗೆ ತುರಿದ್ದಾರೆ.ಆದರೂ ಪೊಲೀಸ ಇಲಾಖೆ ಯಾವ ಕ್ರಮಕ್ಕೂ ಮುಂದಾಗುತ್ತಿಲ್ಲ.

ನಗರ ಸೇರಿದಂತೆ ಜಿಲ್ಲೆಯಲ್ಲಿ 25 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ತಡೆಗಟ್ಟಲು ಜಿಲ್ಲಾಡಳಿತ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ.ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ.ಇದರಿಂದ ಸೋಂಕು ಪ್ರಮಾಣ ಹೆಚ್ಚಾಗುತ್ತಿದೆ.ದಿನನಿತ್ಯ ನೂರಾರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ.2 ಸಾವಿರಕ್ಕೂ ಹೆಚ್ಚು ಸಕ್ರೀಯ ಪ್ರಕರಣಗಳು ಇವೆ. ನಗರದ ಬಹುತೇಕ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರೆತ ಇರುವುದರಿಂದ ಸಕಾಲಕ್ಕೆ ಸೋಂಕಿತರಿಗೆ ಚೀಕಿತ್ಸೆ ದೊರಕುತ್ತಿಲ್ಲ.ಕೊರೊನಾ ಪಿಡಿತರು ಸಾಯುತ್ತಿದ್ದಾರೆ.ಇದರಿಂದ ಮರಣದ ಪ್ರಮಾಣ ಹೆಚ್ಚಾಗಿದೆ.ಆಕ್ಸೀಜನ್ ಹಾಗೂ ವೇಂಟಿಲೇಟರಗಳ ಕೊರತೆ ಇದೆ. ಪರಿಸ್ಥಿತಿ ಕೈ ಮೀರುವ ಮುನ್ನ ಕೂಡಲೇ ಜಿಲ್ಲಾಧಿಕಾರಿಗಳು ಕೊರೊನಾ ಸೋಂಕು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಜಿಲ್ಲಾಡಳಿತದಿಂದ ವ್ಯಾಪಕ ಪ್ರಚಾರ ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.