ಕೊರೊನಾ ನಿಯಂತ್ರಣ ಬಿಗಿಕ್ರಮಕ್ಕೆ ಸೂಚನೆ

Minister sudahakar ashoka basavaraj bommi meetting on covid at Vikas soudha

ಬೆಂಗಳೂರು,ಏ. ೧೭- ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮತ್ತು ಕಂದಾಯ ಸಚಿವ ಆರ್. ಅಶೋಕ್ ರವರು ಇಂದು ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು.
ವಿಕಾಸಸೌಧದಲ್ಲಿಂದು ಈ ಮೂವರು ಸಚಿವರುಗಳು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಭೆ ನಡೆಸಿ ವಿವಿಧ ಜಿಲ್ಲೆಗಳಲ್ಲಿ ರಾಜ್ಯದ ಕೊರೊನಾ ಸ್ಥಿತಿಗತಿಯ ಬಗ್ಗೆ ಮಾಹಿತಿಗಳನ್ನು ಪಡೆದುಕೊಂಡರು.
ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆಯೂ ಅವರು ಸೂಚನೆ ನೀಡಿದರು.
ಯಾವುದೇ ಕಾರಣಕ್ಕೂ ನಿಯಮಾವಳಿಗಳನ್ನು ಸಡಿಲ ಮಾಡದೆ ಬಿಗಿ ಕ್ರಮಗಳನ್ನು ಜಾರಿಗೊಳಿಸಿ ಸೋಂಕನ್ನು ನಿಯಂತ್ರಿಸಿ ಲಸಿಕೆ ನೀಡಿಕೆಯನ್ನು ಹೆಚ್ಚಳ ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಪ್ರತಿ ಜಿಲ್ಲೆಗಳಲ್ಲೂ ಸೋಂಕಿತರ ಪರೀಕ್ಷೆಯನ್ನು ಹೆಚ್ಚಾಗಿ ನಡೆಸಿ ಸೋಂಕನ್ನು ನಿಯಂತ್ರಿಸುವಂತೆಯೂ ಸೂಚನೆ ನೀಡಲಾಯಿತು.