ಕೊರೊನಾ ನಿಯಮಗಳನ್ನು ಪಾಲಿಸಲು ಮನವಿ

ಕಲಬುರಗಿ:ಎ.24: ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಬೇಕು, ಮತ್ತು ಸರ್ಕಾರ ಹೊರಡಿಸಿರುವ ನಿಯಮಗಳನ್ನು ಪಾಲಿಸಬೇಕು ಯಾವುದೇ ಕಾರಣಕ್ಕೂ ಭಯಪಡುವ ಅವಶ್ಯಕತೆಯಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣ) ದ ಜಿಲ್ಲಾಧ್ಯಕ್ಷರಾದ ಆನಂದ್ ತೆಗನೂರ ಹೇಳಿದರು.
ರಾಜ್ಯದಲ್ಲೇ ಪಾಸಿಟಿವ್ ಪ್ರಕರಣಗಳು ಶೇಕಡಾ 16 ರಷ್ಟಿವೆ. ಬೆಂಗಳೂರು ನಗರ ಅತಿ ಹೆಚ್ಚು ಪೀಡಿತವಾಗಿವೆ , ನಂತರದ ಸ್ಥಾನದಲ್ಲಿ ಕಲಬುರ್ಗಿಯಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯವೇ ಮಹಾಭಾಗ್ಯ ಆಗಿರುವುದರಿಂದ ಸಾರ್ವಜನಿಕರು,ಮಹಿಳೆಯರು, ಯುವಕರು, ವೃದ್ಧರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾನಿಟೈಸರ್ ಬಳಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅನವಶ್ಯಕವಾಗಿ ಹೊರಗಡೆ ತಿರುಗಾಡುವುದನ್ನು ನಿಲ್ಲಿಸಬೇಕು ಅಗತ್ಯ ಕೆಲಸಗಳಿದ್ದರೆ ಮಾಸ್ಕ್ ಧರಿಸಿ ಹೊರಗಡೆ ಬರಬೇಕು. ಮುಖ್ಯವಾಗಿ ಯುವಕರು ಬೈಕ್ ಗಳಲ್ಲಿ ವಿನಾಕಾರಣ ಸಂಚರಿಸಬಾರದು. ಬಿಪಿ ಶುಗರ್ ಇದ್ದವರು ಹೊರಗಡೆ ತಿರುಗಾಡಬಾರದು ಎಂದು ಅವರು ಮನವಿ ಮಾಡಿದರು. ಈಗಾಗಲೇ 45 ವರ್ಷ ಮತ್ತು 65 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಕಲಾಗುತ್ತದೆ ತಪ್ಪದೇ ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳಬೇಕು.ಎಲ್ಲರೂ ಲಸಿಕೆಯನ್ನು ಹಾಕಿಸಿಕೊಂಡು ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಮುಂದಾಗಬೇಕು ಎಂದು ಅವರು ತಿಳಿಸಿದರು.