ಕೊರೊನಾ ನಿಯಮ ಉಲ್ಲಂಘನೆ: ದಂಡ ವಸೂಲಿ

ಗದಗ ಮೇ.29: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾ ಪಂಚಾಯತಿಯಿಂದ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಈ ಕಾರ್ಯಪಡೆ ತಂಡಗಳು ಶುಕ್ರವಾರ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾದ ನಿಯಮಗಳ ಉಲ್ಲಂಘಿಸಿದ ಸಾರ್ವಜನಿಕರಿಗೆ ಸ್ಥಳದಲ್ಲೆ ದಂಡ ವಿಧಿಸುವ ಮೂಲಕ 30 ಸಾವಿರಕ್ಕೂ ಅಧಿಕ ದಂಡ ವಸೂಲಾಯಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಹೇರಲಾದ ನಿರ್ಬಂಧಗಳನ್ನು ಉಲ್ಲಂಘಿಸಿದ ವಿವಿಧ ತಾಲ್ಲೂಕಿನ ಗ್ರಾಮಗಳ 300 ಜನರಿಂದ 30 ಸಾವಿರಕ್ಕೂ ಅಧಿಕ ಮೊತ್ತದ ದಂಡವನ್ನು ವಸೂಲಿ ಮಾಡಲಾಗಿದೆ. ಹಾಗೂ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸೋಂಕು ಹರಡುವಿಕೆ ತಡೆಗೆ ಅಗತ್ಯ ಸಂದರ್ಬಗಳನ್ನು ಹೊರತು ಪಡಿಸಿ ವಿನಾಕಾರಣ ಹೊರಬರಬಾರದು. ಅಗತ್ಯವಿದ್ದಲ್ಲಿ ಮಾತ್ರವೇ ಹೊರ ಬಂದು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಬೇಕು. ತಪ್ಪದೇ ಮಾಸ್ಕ ಧರಿಸಿ, ಆಗಾಗ ಕೈಗಳನ್ನು ಸೋಪು, ಸ್ಯಾನಿಟೈಸರ್‍ನಿಂದ ತೊಲೆಯಬೇಕು ಎಂದು ಅರಿವು ಮೂಡಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು ಇಂದು ಲಕ್ಷ್ಮೇಶ್ವರ ತಾಲ್ಲೂಕಿನ ಶೀಗ್ಲಿ, ಸೂರಣಗಿ, ಹೆಬ್ಬಾಳ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಗ್ರಾಮಗಳಿಗೆ ಬೇಟಿನೀಡಿದರು. ಜಿ.ಪಂ ಯೋಜನಾ ನಿರ್ದೇಶಕರು ಗದಗ ತಾಲ್ಲೂಕಿನ ಬಿಂಕದಕಟ್ಟಿ, ಹುಲಕೋಟಿ, ಲಕ್ಕುಂಡಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಗ್ರಾಮಗಳಿಗೆ ಬೇಟಿನೀಡಿದರು. ಜಿ.ಪಂ ಸಹಾಯಕ ಯೋಜನಾಧಿಕಾರಿಗಳು ಮುಂಡರಗಿ ತಾಲ್ಲೂಕಿನ ಡಂಬಳ. ಹಿರೇವಡ್ಡಟ್ಟಿ, ಹಮ್ಮಿಗಿ, ಮೆವುಂಡಿ ಗ್ರ.ಪಂ ಗಳಿಗೆ ತೆರಳಿ ಪರಿಶೀಲಿಸಿದರು.

ಅದರಂತೆ ಆಯಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ನರಗುಂದ ತಾಲ್ಲೂಕಿನ ಹುಣಸಿಕಟ್ಟಿ, ಕಲಕೇರಿ, ಮುಂಡರದಿ ತಾಲ್ಲೂಕಿನ ಬೀಡನಾಳ, ಕೊರ್ಲಹಳ್ಳಿ, ಲಕ್ಷೆ?ಮೀಶ್ವರ ತಾಲ್ಲೂಕಿನ ಗೋಜನೂರ, ದೊಡ್ಡೂರ, ಸೂರಣಗಿ, ರೋಣ ಮತ್ತು ಗಜೇಂದ್ರಗಡ ತಾಲ್ಲೂಕಿನ ಬೆಳವಣಿಕೆ, ಸವಡಿ, ಮಲ್ಲಾಪೂರ, ಗದಗ ತಾಲ್ಲೂಕಿನ ನಾಗಾವಿ, ಕಳಸಾಪೂರ, ಶಿರಹಟ್ಟಿ ತಾಲ್ಲೂಕಿನ ಚಬ್ಬಿ, ಬೆಳ್ಳಟ್ಟಿ ಗ್ರಾಮ ಪಂಚಾಯತಿಗಳಿಗೆ ಬೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಸಾರ್ವಜನಿಕರು ಗುಂಪುಗೂಡದಂತೆ ತಿಳಿಸಿ, ಸೋಂಕಿತರು ಕಡ್ಡಾಯವಾಗಿ ಆರೈಕೆ ಕೇಂದ್ರಗಳಿಗೆ ಆಗಮಿಸಿ ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡುವಿಕೆ ತಡೆಗೆ ಸ್ಥಳೀಯ ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಪೆÇರ್ಸ್ ತಂಡ ರಚಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಹಾಗೂ ಆಯಾ ತಾ.ಪಂ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನಿಯಮಿತವಾಗಿ ಬೇಟಿನೀಡಿ ಪರಿಶೀಲಿಸಲು ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು ಗ್ರಾಮಗಳ ಪೈಕಿ 59 ಗ್ರಾಮಗಳು ಕೋರೋನಾ ಸೋಂಕು ಮುಕ್ತ ಗ್ರಾಮಗಳಾಗಿದ್ದು, ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಸಮನ್ವಯದೊಂದಿಗೆ ಅಧಿಕಾರಿಗಳ ಸಕ್ರೀಯ ಸತತ ಪ್ರಯತ್ನದಿಂದ ಎಲ್ಲ ಗ್ರಾಮಗಳನ್ನು ಕೊರೋನಾ ಮುಕ್ತವಾಗಿಸುವಲ್ಲಿ ಶ್ರಮಿಸಿ. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಮಾಡುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಹೇಳಿದ್ದಾರೆ.