ಕೊರೊನಾ ಭಯ : ರೈಲಿಗೆ ತಲೆಕೊಟ್ಟ ಪತ್ರಕರ್ತ

ದಾವಣಗೆರೆ.ಮೇ.೫; ತಾಲೂಕಿನ ಕುಂದೂರು ಗ್ರಾಮದ ಪತ್ರಕರ್ತ ಪರಮೇಶ್ ಕೊರೊನಾ ಭಯದ ಕಾರಣ ಅಮರಾವತಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌‌.ಇವರಿಗೆ ಕೆಲ ದಿನಗಳಿಂದ ಶೀತ, ಜ್ವರ, ಕೆಮ್ಮು ಇದ್ದು, ಕೊರೊನಾ ಭಯದಿಂದ ನಲುಗುತ್ತಿದ್ದರು. ಟೆಸ್ಟ್ ಮಾಡಿಸಿ ಪಾಸಿಟಿವ್ ಬಂದರೆ ಎಲ್ಲಿ ಇರೋದು, ಬೆಡ್, ವೆಂಟಿಲೇಟರ್, ಆಕ್ಸಿಜನ್ ಸಿಗುತ್ತಿಲ್ಲ. ಮುಂದೆ ಏನು ಎಂಬ ಚಿಂತೆಯಲ್ಲಿ ಪರಮೇಶ್ ಇದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಇವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದರು. ಕುಂದೂರು ಸುಮಾರು 10ರಿಂದ 15 ವರ್ಷಗಳ ಕಾಲ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದು, ಸರಕಾರಿ ಶಾಲೆಗಳಲ್ಲಿನ ಲೋಪ, ಖಾತರಿಯಲ್ಲಿ ಭ್ರಷ್ಟಾಚಾರ ಸೇರಿದಂತೆ ಇನ್ನಿತರ ಕಡೆ ನಡೆಯುತ್ತಿದ್ದ ಭ್ರಷ್ಟಚಾರವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸಿತ್ತು. ಅದರಲ್ಲೂ ಸರಕಾರಿ ಶಾಲೆಗಳ ಮೇಲೆ ಅವರಿಗೆ ಅಪಾರವಾದ ಪ್ರೀತಿ ಇತ್ತು. ಎಷ್ಟೋ ಸಮಸ್ಯೆಗಳನ್ನು ಬರವಣಿಗೆ ಮೂಲಕ ಭ್ರಷ್ಟರನ್ನು ಕುಟುಕಿದ್ದರು. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.