ಕೊರೊನಾ ಭೀತಿ ; ಗ್ಯಾಬ್ರಿಯಾಸ್ ಕ್ವಾರಂಟೈನ್

ಜಿನೇವಾ,(ಸ್ವಿಟ್ಜರ್ಲೆಂಡ್).ನ.೨- ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅದಾನಮ್ ಗ್ಯಾಬ್ರಿಯಾಸ್ ಕೊರೋನಾ ಸೋಂಕಿನ ಭೀತಿಯಿಂದ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಟೆಡ್ರೋಸ್ ಅವರ ಸಂಪರ್ಕಕ್ಕೆ ಬಂದ ವ್ಯಕ್ತಿಯೊಬ್ಬರು ಕೊರೊನಾ ಸೋಂಕು ದೊಡ್ಡ ಕೊಟ್ಟ ಹಿನ್ನೆಲೆಯಲ್ಲಿ ಅವರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಈ ವಿಷಯವನ್ನು ಸ್ವತಃ ಟ್ವೀಟ್ ಮಾಡಿರುವ ಟೆಡ್ರೋಸ್ ಅದಾನಮ್ ಗ್ಯಾಬ್ರಿಯಾಸ್ ಅವರು ತಮ್ಮ ಸಂಪರ್ಕಕ್ಕೆ ಬಂದ ವ್ಯಕ್ತಿ ಸೋಂಕಿತರ ಆಗಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳ ಕಾಲ ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ ಎಂದು ಅವರು ತಿಳಿಸಿದ್ದಾರೆ
ಜಗತ್ತಿನಾದ್ಯಂತ ನಾಲ್ಕು ಕೋಟಿ ಅರವತ್ತು ಲಕ್ಷಕ್ಕೂ ಅಧಿಕ ಮಂದಿಗೆ ಕರೋನಾ ವೈರಸ್ ಕಾಣಿಸಿಕೊಂಡಿದ್ದು ಇದುವರೆಗೂ ಸೋಂಕಿನಿಂದಾಗಿ ೧ ಲಕ್ಷದ ೨೦ ಸಾವಿರ ಮಂದಿ ಮೃತಪಟ್ಟಿದ್ದಾರೆ. ವಿಶ್ವದಲ್ಲಿ ಕರೋನಾ ಸೋಂಕು ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ತಮ್ಮ ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಅವರು ಜನರಿಗೆ ಮನವಿ ಮಾಡಿದ್ದಾರೆ.
ಕರೋನವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಪಾತ್ರವೂ ಹಿರಿದು ಎಂದು ಆರೋಪಿಯಾದ ಮಾಜಿ ಸಚಿವರೊಬ್ಬರು ಮನವಿ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಕೂಡ ಜಗತ್ತಿನ ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಕೊರನೋ ಸೋಂಕಿನ ಬಗ್ಗೆ ಜನರು ಜಾಗೃತವಾದಾಗ ಸೋಂಕು ತಡೆಗಟ್ಟಲು ಸಹಕಾರಿಯಾಗಲಿದೆ ಇಲ್ಲದಿದ್ದರೆ ಹೆಚ್ಚಳವಾಗಲಿದೆ ಎಂದು ಅವರು ತಿಳಿಸಿದ್ದಾರೆ