ಕೊರೊನಾ ಮುಕ್ತ ಸಮಾಜಕ್ಕೆ ಕೆಎನ್‌ಆರ್ ಪ್ರಾರ್ಥನೆ

ಮಧುಗಿರಿ, ಏ. ೩- ಸಾರ್ವಜನಿಕರು ಕೊರೊನಾ ವೈರಸ್‌ನಿಂದ ಮುಕ್ತರಾಗಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿದರು.
ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀ ದಂಡಿನಮಾರಮ್ಮ ಜಾತ್ರಾ ಮಹೋತ್ಸವದ ೧೦ನೇ ದಿನದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಳೆದ ವರ್ಷ ಜಾತ್ರೆ ಆರಂಭವಾಗಿ ಮೂರನೇ ದಿನವೇ ಜಾತ್ರೆ ಕೊರೊನಾ ಕಾರಣದಿಂದ ಸ್ಥಗಿತವಾಗಿತ್ತು. ಈಗ ಕೊರೊನಾ ಎರಡನೆ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜಾತ್ರಾ ಮಹೋತ್ಸವ ನಿಂತಿದೆ. ತಾಲ್ಲೂಕಿನಲ್ಲಿ ಕಾಲ ಕಾಲಕ್ಕೆ ಉತ್ತಮ ಮಳೆಯಾಗಿ ರೈತರಿಗೆ ಸಹಕಾರಿಯಾಗಲಿ ಎಂದರು.
ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್ ರಾಜೇಂದ್ರ, ರಶ್ಮಿ, ಪುರಸಭಾಧ್ಯಕ್ಷ ತಿಮ್ಮರಾಜು, ಮಾಜಿ ಅಧ್ಯಕ್ಷ ಎಂ. ಕೆ. ನಂಜುಂಡಯ್ಯ, ಎನ್ .ಗಂಗಣ್ಣ, ಡಿ .ಜಿ. ಶಂಕರನಾರಾಯಣಶೆಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ. ನಾಗೇಶ್‌ಬಾಬು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ ದೇನಾನಾಯ್ಕ, ಎಪಿಎಂಸಿ ಅಧ್ಯಕ್ಷ ಡಿ .ಶ್ರೀನಿವಾಸ್, ಮಹಿಳಾ ಕಾಂಗ್ರೆಸ್‌ನ ಸುವರ್ಣಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಆದಿನಾರಾಯಣರೆಡ್ಡಿ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಎಂ .ಎಸ್. ಮಲ್ಲಿಕಾರ್ಜುನಯ್ಯ, ಎಸ್.ಆರ್. ರಾಜಗೋಪಾಲ್ ಸೇರಿದಂತೆ ಸಿದ್ಧಾಪುರ, ದಬ್ಬೆಘಟ್ಟ, ಐ.ಡಿ.ಹಳ್ಳಿ, ಡಿ.ವಿ. ಹಳ್ಳಿ, ಗಂಜಲಗುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು.