ಕೊರೊನಾ: ರಾಷ್ಟ್ರೀಯ ವಿಪತ್ತು ಘೋಷಣೆಗೆ ಆಗ್ರಹ

ಕಲಬುರಗಿ,ಮೇ.19-ಕೊರೊನಾ ಸಂಕಷ್ಟವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ಕನ್ನಡ ಸೈನ್ಯದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ಮಾಡಿದರು.
ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತ ಚಿಕಿತ್ಸೆ ನೀಡಬೇಕು, ಕಡು ಬಡವರು, ರೈತರು, ಕೂಲಿ ಕಾರ್ಮಿಕರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಪ್ರತಿ ಕುಟುಂಬಕ್ಕೆ 20 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು, ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಸೋಮನಾಥ ಎಲ್.ಕಟ್ಟಿಮನಿ, ರಾಜಶೇಖರ ಎಲ್.ಕಟ್ಟಿಮನಿ, ತರುಣ ಹರಳಯ್ಯ, ರಾಹುಲ್ ಎಲ್.ಕಟ್ಟಿಮನಿ, ಶ್ರೀಧರ ಕಟ್ಟಿಮನಿ, ಶರಣು ಹಾಗರಗಿ, ಸುನೀಲ, ರಾಜು ಸಂಗೋಳಿಕರ್, ಶರಣು ಪಾಟೀಲ, ಮೋಹನರಾಜ್ ಆರ್.ಕೆ, ಆಕಾಶರೆಡ್ಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.