ಕೊರೊನಾ ವಾರಿಯರ್ಸ್‍ಗಳು ಸಲ್ಲಿಸಿದ ಸೇವೆ ಅನನ್ಯ: ನಕುಲ್

ಬಳ್ಳಾರಿ,ಜ.03: ಕೊರೊನಾ ವಾರಿಯರ್ಸ್‍ಗಳು ಕೋವಿಡ್ ಸಂದರ್ಭದಲ್ಲಿ ಸಲ್ಲಿಸಿದ ಸೇವೆ ಅನನ್ಯವಾಗಿದೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಭಿಪ್ರಾಯಪಟ್ಟಿದ್ದಾರೆ.
ಅವರು ನಿನ್ನೆ ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಕೋವಿಡ್ ವಾರಿಯರ್ಸ್‍ಗಳಿಗೆ ಪ್ರಮಾಣಪತ್ರ ವಿತರಿಸಿದ ಮಾತನಾಡಿದರು. ಕೊರೊನಾ ಸೈನಿಕರು ಕೋವಿಡ್ ಕುರಿತು ಜಾಗೃತಿ,ಮಾಸ್ಕ್ ವಿತರಣೆ, ಹ್ಯಾಂಡ್ ವಾಶ್ ಪ್ಲಾಟ್‍ಫಾರಂ, ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಸ್ಥಳಕ್ಕೆ ತೆರಳುವಂತೆ ನೋಡಿಕೊಂಡಿರುವುದು, ತರಕಾರಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಪಾಲನೆ, ಆಹಾರ ವಿತರಣೆ ಸೇರಿದಂತೆ ಅನೇಕ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ ಎಂದರು.
ಕೋವಿಡ್ ಸಮಯದಲ್ಲಿ ಹಸಿವಿನಿಂದ ಬಳಲುತ್ತಿದ್ದ ಹಲವು ಜನ ನಿರಾಶ್ರಿತರಿಗೆ, ಒಂದೊತ್ತಿನ ಊಟಕ್ಕೂ ಪರದಾಡುವಂತ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಂತಹ ಸಾಮನ್ಯ ಜನರಿಗೆ ಆಹಾರದ ಕಿಟ್‍ಗಳನ್ನು ವಿತರಿಸುವ ಮೂಲಕ ಬಡವರಿಗೆ ನೆರವಾಗಿರುವುದು ಒಂದು ಉತ್ತಮ ಕಾರ್ಯ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಶ್ಲಾಘಿಸಿದರು.
ಕೋವಿಡ್ ಸಮಯದಲ್ಲಿ ಹಸಿವಿನಿಂದ ಬಳಲುತ್ತಿದ್ದಂತ ನೂರಾರು ಜನರಿಗೆ ನೀವು ಧ್ವನಿಯಾಗಿ ಕೆಲಸ ಮಾಡಿದ್ದೀರಿ. ತುಂಬಾ ಜನ ಒಂದೊತ್ತಿನ ಊಟಕ್ಕೂ ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಅಂತಹ ಕಷ್ಟದ ಸಮಯದಲ್ಲಿ ನಿರಾಶ್ರಿತರಿಗೆ ಹೆಗಲು ನೀಡಿದ್ದೀರಿ. ಬಡಜನರ ಆಶಿರ್ವಾದ ನಿಮ್ಮ ಮೇಲಿರಲಿದೆ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ ಐಲಿ ಅವರು ಮಾತನಾಡಿ, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೈನಿಕರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಷಕೀಬ್ ಅವರು ಮಾತನಾಡಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ಚಂದ್ರಶೇಖರ,ಅನ್ನಪೂರ್ಣ ಸದಾಶಿವ, ರೇಖಾ ಪ್ರಕಾಶ, ಬಾಲಕಾರ್ಮಿಕ ಯೋಜನಾಧಿಕಾರಿ ಮೌನೇಶ ಮೊದಲಾದವರು ಇ