ಕೊರೊನಾ ವ್ಯಾಪಕವಾಗಿ ಹರಡುತ್ತಿರುವಹಿನ್ನೆಲೆಯಲ್ಲಿ ಅಧಿಕಾರಿಗಳು ಕಟ್ಟು ನಿಟ್ಟಾಗಿ ಕೆಲಸ ನಿರ್ವಹಿಸಲು ಸೂಚನೆ

ಆಳಂದ ;ಎ.7: ಕೊರೊನಾ ವೈರಸ್ ಜಿಲ್ಲೆಯಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವುದರಿಂದ ತಾಲೂಕಿನಲ್ಲಿ ಮುಂಜಾಗ್ರತವಾಗಿ ಅಧಿಕಾರಿಗಳು ತಮಗೆ ವಹಿಸಿದ ಕೆಲಸವನ್ನು ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು ಎ.ಸಿ ರಾಮಚಂದ್ರ ಗಡದೆ ಅಧಿಕಾರಿಗಳಿಗೆ ಸೂಚಿಸಿದರು. ಆಳಂದ ತಹಸೀಲ್ದಾರ ಕಾರ್ಯಲದಯಲ್ಲಿ ಕೊರೊನಾ ತಡೆಯಲು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಈಗಾಲೆ ಮಹಾರಾಷ್ರ್ಟದಲ್ಲಿ ತಿವ್ರಗತಿಯಲ್ಲಿ ಸೊಂಕು ಏರಿಕೆ ಕಂಡು ಬರುತ್ತಿದೆ ಗಡಿ ತಾಲೂಕು ಆಗಿರುವುದರಿಂದ ಇಲ್ಲಿಯು ಸೋಂಕಿನ ಪ್ರಮಾಣ ಹೆಚ್ಚುವ ಸಂಭವಿದೆ ಹೀಗಾಗಿ ಎಲ್ಲ ಇಲಾಖೆ ಅಧಿಕಾರಿಗಳು ಇದನ್ನು ತಡೆಯಬೇಕಿದೆ ತಾಲೂಕು ಆರೋಗ್ಯಾಧಿಕಾರಿಗಳು ಲಸಿಕೆ ಪ್ರಮಾಣವನ್ನು ಹೆಚ್ಚಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಅಂಗನವಾಡಿ ಶಿಕ್ಷಕರನ್ನು ಪ್ರಾಥಮಿಕ ಶಾಲೆ ಶಿಕ್ಷಕರನ್ನು ಜಾಗೃತಿ ಅಭಿಯಾನದಲ್ಲಿ ತೊಡಿಗಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಅಭಯಕುಮಾರ ಕುಲಕರ್ಣಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರ ಉಪಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡಲಾಗುತ್ತಿದೆ. ಪ್ರತಿದಿನ ಪ್ರತಿ ಆರೋಗ್ಯ ಕೇಂದ್ರದಲ್ಲಿ 100 ಜನರಿಗೆ ನೀಡಲಾಗುತ್ತಿದೆ ವ್ಯಾಕ್ಸಿನ್ ಇದರ ಪ್ರಮಾಣ ಇನ್ನೂ ಹೆಚ್ಚಿಸಲಾಗವುದು ಎಂದರು. ಗ್ರಾಮಪ ಪಂಚಾಯತ ಪಿಡಿಓ ಗ್ರಾಮದ 45 ವರ್ಷದ ಮಟ್ಟದ ಜನರನ್ನು ಗುರುತಿಸಿ ಸಮೀಪದ ಆರೋಗ್ಯ ಕೇಂದ್ರಕ್ಕೆ ಕಳುಹಿಸಲು ಕ್ರಮವಹಿಸಬೇಕು ಎಂದರು.ತಾಲೂಕು ಮಟ್ಟದ ಅಧಿಕಾರಿಗಳು ಆಡಳಿತ ವೈದ್ಯಾಧಿಕಾರಿಗಳು ಇದ್ದರು.