ಕೊರೊನಾ ಸೋಂಕು ಏರಿಳಿತ

ನವದೆಹಲಿ,ನ.೯- ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ನಿನ್ನೆಗಿಂತ ತುಸು ಕಡಿಮೆಯಾಗಿದೆ. ಈ ಸಂಖ್ಯೆ ಕಳೆದ ಹಲವು ದಿನಗಳಿಂದ ಎರಡು ಮೂರು ದಿನಗಳಿಗೊಮ್ಮೆ ಏರಿಳಿತವಾಗುತ್ತಿದೆ.
ದೇಶದಲ್ಲಿ ಕಳೆದ ೨೪ ಗಂಟೆಯ ಅವಧಿಯಲ್ಲಿ ೧೦,೧೨೬ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೨೬೬ ದಿನದ ಬಳಿಕ ಅತಿ ಕಡಿಮೆ ಸೋಂಕಿನ ಪ್ರಮಾಣ ಇದಾಗಿದೆ. ೩೩೨ ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ೧೧,೯೮೨ ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇಂದು ಬೆಳಗ್ಗೆ ೮ ಗಂಟೆಯ ತನಕ ದಾಖಲಾಗಿರುವ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿಯ ತನಕ ಒಟ್ಟಾರೆಯಾಗಿ ಸೋಂಕಿನ ಸಂಖ್ಯೆ, ೩,೪೩ ಕೋಟಿಗೆ ಏರಿಕೆಯಾಗಿದೆ. ಜೊತೆಗೆ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾದವರ ಸಂಖ್ಯೆ ೩,೩೭,೭೫,೦೮೬ ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.
ದೇಶದಲ್ಲಿ ೨೬೩ ದಿನದ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ ಅತಿ ಕಡಿಮೆ ಸಂಖ್ಯೆಯಲ್ಲಿ ದಾಖಲಾಗಿದೆ. ಸದ್ಯ ಈ ಸಂಖ್ಯೆ ೧,೪೦,೬೩೮ ಮಂದಿಯಲ್ಲಿ ಸಕ್ರಿಯ ಪ್ರಕರಣ ಇದೆ, ಒಟ್ಟಾರೆ ಸೋಂಕಿನ ಪ್ರಮಾಣ ಶೇ.೦.೪೧ ರಷ್ಟು ಇದೆ.
ಸೋಂಕಿನ ದಿನದ ಪಾಸಿಟಿವಿಟಿ ಪ್ರಮಾಣ ಶೇ.೧ಕ್ಕಿಂತ ಕಡಿಮೆ ಇದ್ದು ಈ ಪ್ರಮಾಣ ಶೇ.೦೯೩ ರಷ್ಟು ಇದೆ. ವಾರದ ಸರಾಸರಿ ಪ್ರಮಾಣ ಶೇ.೧,೨೫ ರಷ್ಟು ಇದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಇದುವರೆಗೆ ೧೦೯.೦೮ ಕೋಟಿ ಡೋಸ್ ಲಸಿಕೆ ಹಾಕಲಾಗಿದ್ದು ಜೊತೆಗೆ ೬೧.೭೨ ಕೋಟಿ ಜನರಿಗೆ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಚೇತರಿಕೆ ಏರಿಕೆ
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಚೇತರಿಕೆ ಪ್ರಮಾಣ ಶೇ. ೯೮.೨೫ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.೧ ಕ್ಕಿಂತ ಕಡಿಮೆ ಇದೆ. ಈ ಪ್ರಮಾಣ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ.