ಕೊರೊನಾ ಹೆಚ್ಚಳ ಪ್ರಚಾರಕ್ಕೆ ದೀದಿ ಬ್ರೇಕ್

ಕೋಲ್ಕತ್ತಾ, ಏ.೧೯- ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ಸಂಖ್ಯೆ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿ ಕೋಲ್ಕತ್ತಾದಲ್ಲಿ ಪ್ರಚಾರ ನಡೆಸದಿರಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.
ಪಶ್ಚಿಮ ಬಂಗಾಳದ ೮ ಹಂತದ ವಿಧಾನಸಭೆ ಚುನಾವಣೆ ಪೈಕಿ ೫ ಹಂತದ ಚುನಾಚಣೆ ಮುಗಿದುದ್ದು ಇನ್ನೂ ೩ ಹಂತದ ಚುನಾವಣೆ ಬಾಕಿ ಉಳಿದಿದೆ.
ಈ ಹಿನ್ನೆಲೆಯಲ್ಲಿ ರಾಜಧಾನಿ ಕೋಲ್ಕತ್ತಾದಲ್ಲಿ ಚುನಾವಣೆ ನಡೆಯುವುದು ಬಾಕಿ ಇದೆ. ಸೋಂಕು ಹೆಚ್ಚಳದಿಂದಾಗಿ ಕೋಲ್ಕತ್ತಾದಲ್ಲಿ ಚುನಾವಣಾ ಪ್ರಚಾರದಿಂದ ದೂರ ಉಳಿಯುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಕಟಿಸಿದ್ದಾರೆ.
ಏಪ್ರಿಲ್ ೨೬ ರಂದು ಸಾಂಕೇತಿಕವಾಗಿ ಕೋಲ್ಕತ್ತಾದಲ್ಲಿ ರ್ಯಾಲಿ ನಡೆಸಲು ಮಮತಾ ಬ್ಯಾನರ್ಜಿ ಅವರು ಮುಂದಾಗಿದ್ದಾರೆ ಎಂದು ಟಿಎಂಸಿ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಕ್ಷದ ಹಿರಿಯ ಮುಖಂಡ ಡೆರಿಕ್ ಓಬ್ರಿಯಾನ್ ಕೋಲ್ಕತ್ತಾದಲ್ಲಿ ನಿತ್ಯ ಕೊರನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಚಾರ ನಡೆಸದಿರಲು ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಶ್ಚಿಮ ಬಂಗಾಳದಲ್ಲಿ ಚುನಾವನಾ ಪ್ರಚಾರ ಕಣದಿಂದ ಹಿಂದೆ ಸರಿದು, ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆ ನಡೆಸದಂತೆ ರಾಜಕೀಯ ಪಕ್ಷಗಳ ನಾಯಕರಿಗೆ ಮನವಿ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಉಳಿದ ಮೂರು ಹಂತದ ಚುನಾಚಣೆ ಕಾವು ಪಡೆದಿದೆ. ಆದರೆ ಕೊರೊನಾ ಸೋಂಕು ಹೆಚ್ಚಳ ರಾಜಕೀಯ ನಾಯಕರನ್ನು ತಳಮಳಗೊಳ್ಳುವಂತೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಹಲವು ನಾಯಕರು ಪ್ರಚಾರದಿಂದ ದೂರ ಉಳಿದಿದ್ದಾರೆ.