ಕೊರೊನಾ ಹೆಚ್ಚಳ: ಹರಿಯಾಣ ‌ಮೇ- 24 ಪಂಜಾಬ್ – 31 ಲಾಕ್ ಡೌನ್‌ ವಿಸ್ತರಣೆ

ನವದೆಹಲಿ,ಮೇ.16- ದೇಶದ ವಿವಿಧ ಭಾಗಗಳಲ್ಲಿ ಕೊರೋನಾ ಸಂಖ್ಯೆ ನಿತ್ಯ ಏರಿಕೆಯಾಗುತ್ತಿರುವ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಲಾಕ್ ಡೌನ್ ವಿಸ್ತರಿಸಿ ಆಯಾ ರಾಜ್ಯ ಸರ್ಕಾರಗಳ ಆದೇಶ

ಹರಿಯಾಣದಲ್ಲಿ ಮೇ24 ರ ಲಾಕ್ ಡೌನ್ ವಿಸ್ತರಿಸಲಾಗಿದೆ. ಪಂಜಾಬ್ ನಲ್ಲಿ ಮೇ 31 ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶಿಸಿದೆ.

ಹರಿಯಾಣದಲ್ಲಿ ದಿನದಿಂದ ದಿನಕ್ಕೆ ಕೋರೊನಾ ಸೋಂಕು ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 24ರ ತನಕ ವಿಸ್ತರಿಸಿ ಸರಕಾರ ಆದೇಶಿಸಿದೆ.

ಲಾಕ್ ಡೌನ್ ಅವಧಿ ನಾಳೆಗೆ ಮುಕ್ತಾಯವಾಗುತ್ತಿರುವ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಸರ್ಕಾರ ಮತ್ತೆ ಒಂದು ವಾರ ವಿಸ್ತರಿಸಿ ಆದೇಶಿಸಿದೆ‌

ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಅನಿಲ್ ವಿಜ್ ಅವರು ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಹೋಗಿದ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಸತ್ಯದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಕೂಡ ಅವರು ಹೇಳಿದ

ಪಂಜಾಬ್ ನಲ್ಲಿ ಕಠಿಣ ಕ್ರಮ:

ಪಂಜಾಬಿನಲ್ಲಿ ನಿತ್ಯ ಕೊರೋನಾ ಸೋಂಕು ಸಂಖ್ಯೆ ಮತ್ತು ನಿತ್ಯ ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿರುವ. ಹಿನ್ನೆಲೆಯಲ್ಲಿ ಮೇ. 31ರವರೆಗೂ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿಸ್ತರಿಸಿ ಆದೇಶಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ರಾಜ್ಯದ ಜನ ಕಟ್ಟುನಿಟ್ಟಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.