ಕೊರೋನಾದಿಂದ ಆಗಬಹುದಾದ ತೊಂದರೆಗಳ ಕುರಿತು ಮನವರಿಕೆ

ಕೆ.ಆರ್.ಪೇಟೆ.ಮೇ.1: ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾಶಿಮುರುಕನಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಕೊರೋನಾದಿಂದ ಆಗಬಹುದಾದ ತೊಂದರೆಗಳ ಕುರಿತು ಮನವರಿಕೆ ಹಾಗೂ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಯಿತು.
ಈ ಕುರಿತು ಮಾತನಾಡಿದ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹರ್ಷವರ್ಧನ ಗ್ರಾಮಪಂಚಾಯಿತಿ ವತಿಯಿಂದ ಜನರಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಗುತ್ತಿದ್ದು ಗ್ರಾಮೀಣ ಪ್ರದೇಶದ ಜನರು ಗುಂಪಾಗಿ ಕುಳಿತುಕೊಳ್ಳಬಾರದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಕೊರೋನಾ ಮಹಾಮಾರಿಯ ಅಟ್ಟಹಾಸ ಮುಕ್ತಾಯವಾಗುವವರೆಗೂ ಹೋಟೆಲ್ ಗಳ ಬಳಿ ಸಾಮೂಹಿಕವಾಗಿ ಸೇರಬಾರದು, ಮನೆಯಿಂದ ಹೊರಬರುವಾಗ ಮಾಸ್ಕ್ ಧರಿಸಬೇಕು. ಸರ್ಕಾರದ ಸೂಚನೆಗಳನ್ನು ಪಾಲಿಸಿ ಕೊರೋನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.