ಕೊರೋನಾಹಿನ್ನಲೆನೆರವಿನ ಹಸ್ತಕ್ಕೆ ಸಂಸದರ ಮನವಿ: ಸ್ಪಂದಿಸಿದ ಸಂಸ್ಥೆಗಳು

ಮಂಗಳೂರು, ಎ.೨೯- ಕೋರೋನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಆಕ್ಸಿಜಿನ್ ಘಟಕಗಳ ನಿರ್ಮಾಣ, ಆಕ್ಸಿಜಿನದ ಸಿಲೆಂಢರ್ ಸೇರಿದಂತೆ ಮತ್ತಿತರ ಅತ್ಯಗತ್ಯ ವೈದ್ಯಕೀಯ ನೆರವು ನೀಡುವಂತೆ ಸಂಸದ ನಳಿನ ಕುಮಾರ್ ಕಟಿಲ್ ಜಿಲ್ಲೆಯಲ್ಲಿರುವ ಸರ್ಕಾರಿ ಸಹಭಾಗಿತದ್ವದ ಕಂಪೆನಿಗಳಿಗೆ ಹಾಗೂ ಖಾಸಗಿ ಕಂಪನೆಗಳಿಗೆ ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆ ನಿರ್ವಹಣೆ ಕುರಿತು ನಡೆದ
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇಶದಲ್ಲಿ ಹಿಂದೆಂದೂ ಕಾಣದಂತಹ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುವುದರೊಂದಿಗೆ ಸಂಕಷ್ಟಕದ ಪರಿಸ್ಥಿತಯಲ್ಲಿ ನಾವಿದ್ದೇವೆ ಕೊರೋನಾ ಸೋಂಕು ದಿನೆ ದಿನೇ
ಹೆಚ್ಚಾಗತೊಡಗಿದ್ದು, ಸೋಕಿತರನ್ನು ಉಳಿಸಿಕೊಳ್ಳುವುದು ಸರ್ಕರ ಮತ್ತು ವೈದ್ಯರಿಗೆ ದೊಡ್ಡ ಸವಾಲಾಗಿದೆ. ಇಂತಹ ಸಂಕಷ್ಟ ಪರಿಷ್ಥಿತಿಯಲ್ಲಿ ಸರ್ಕಾರಿ ಸಹಭಾಗಿತ್ವದ ಕಂಪೆನಿಗಳು ಹಾಗೂ ಖಾಸಗಿ ಕಂಪೆನಿಗಳು ಸರ್ಕಾರಕ್ಕೆ ನೆರವಿನ ಹಸ್ತ ಚಾಚಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದು ಅವರುಗಳಿಗೆ ಉತ್ತಮ ಚಿಕತ್ಸೆ ನೀಡಲು ಅತ್ಯಗತ್ಯವಿರುವ ಆಕ್ಸಿಜಿನ್ ಬೆಡ್ ಗಳನ್ನು ಹೆಚ್ಚು ಕಾಯ್ದಿರಿಸಿಕೊಳ್ಳುವುದರೊಂದಿಗೆ ಅವರುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾಡೆಳಿತ ಮುಂದಾಗಬೆಕು ಎಂದು ಸೂಚನೆ ನೀಡಿದರು.
ಹೊರರಾಜ್ಯ ಮತ್ತು ಜಿಲ್ಲೆಗಳಿಂದ ಬಂದಿರುವವರಿಂದ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗುವುದು ಕಂಡು ಬರುತ್ತಿದೆ ಈ ಹಿನ್ನಲೆ ಅವರುಗಳನ್ನು ತಪ್ಪದೇ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕೆಂದು ಸೂಚನೆ ನೀಢಿದರು.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ತೀವ್ರವಾಗಿ ಹೆಚ್ಚಾದಲ್ಲಿ , ಅಗತ್ಯ ಕಂಡುಬಂದಾಗ ವಿಶ್ವಿವಿದ್ಯಾನಿಲಯಗಳ ವಿದ್ಯಾರ್ಥಿ ನಿಲಯಗಳು, ಸರ್ಕಾರಿ ವಿದ್ಯಾರ್ಥಿ ನಿಲಯ ಹಾಗು ಶಾಲೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯ ಮೂಲಭೂತ ಸೌಕರ್ಯ ಒಳಗೊಂಡ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಜಿಲ್ಲೆಯಲ್ಲಿನ ಖಾಸಗಿ ಸಂಸ್ಥೆಗಳಾದ ಮಂಗಳೂರು ರಿಫೈನರಿ ಮತ್ತು ಪೆಟ್ರೊಕೆಮಿಕಲ್ಸ್ ಲಿಮಿಟೆಡ್ (ಎಂಆರ‍್ಪಿಎಲ್) ವತಿಯಿಂದ ವೆನ್ ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ೯೩೦ ಟಠಿm ಸಾಮಥ್ರ್ಯದ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆ, ಮಂಗಳೂರು ಕೆಮಿಕಲ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (ಎಂಸಿಎಫ್) ವತಿಯಿಂದ ಕಾರ್ಮಿಕರ ರಾಜ್ಯ ವಿಮಾ ಆಸ್ಪತ್ರೆ (ಇSI) ಹಾಗೂ ಬಂಟ್ವಾಳ ತಾಲೂಕು ಆಸ್ಪತ್ರೆಗಳಲ್ಲಿ ೮೦ ಟಠಿm ಸಾಮಥ್ರ್ಯದ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ, ಗೇಲ್ ಇಂಡಿಯಾ ಲಿಮಿಟೆಡ್ ಮತ್ತು ಗೇಲ್ ಗ್ಯಾಸ್ ವತಿಯಿಂದ ಪುತ್ತೂರು ಮತ್ತು ಬೆಳ್ತಂಗಡಿಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ, ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್ (ಕೆಐಒಸಿಲ್) ವತಿಯಿಂದ ಉಪ್ಪಿನಂಗಡಿ ಮತ್ತು ಮೂಡಬಿದ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ, ಇನ್ಫೊಸಿಸ್ ಮಂಗಳೂರು ವತಿಯಿಂದ ಉಳ್ಳಾಲದಲ್ಲಿ ವಿದ್ಯುತ್ ಚಿತಾಗಾರ ಸ್ಥಾಪನೆ, ಮಂಗಳೂರು ವಿಶೇಷ ಆರ್ಥಿಕ ವಲಯ ಲಿಮಿಟೆಡ್ ವತಿಯಿಂದ ಜಿಲ್ಲೆಯಾದ್ಯಂತ ಆಂಬುಲೆನ್ಸ್ ನಿರ್ವಹಣೆ, ಆಂಬುಲೆನ್ಸ್ ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು ಅವಶ್ಯಕತೆಗನುಗುಣವಾಗಿ ತಕ್ಷಣ ಒದಗಿಸಲು ಕ್ರಮವಹಿಸುವುದು., ಭಾರತೀಯ ಉದ್ಯಮಗಳ ಒಕ್ಕೂಟ ಮಂಗಳೂರು ಘಟಕ (ಸಿಐಐ) ವತಿಯಿಂದ ಬಾಡಿಗೆ ಆಧಾರದಲ್ಲಿ ೧೦೦ ಆಮ್ಲಜನಕ ಸಿಲಿಂಡರ‍್ಗಳ ಪೂರೈಕೆ. ನವಮಂಗಳೂರು ಪೋರ್ಟ್ ಟ್ರಸ್ಟ್ ವತಿಯಿಂದ ೨೦ ಡ್ಯೂರೋ ಸಿಲಿಂಡರ್ , ಬಿಎಎಸ್ ಎಫ್ ಇಂಡಿಯಾ ಲಿಮಿಟೆಡ್ ವತಿಯಿಂದ ೨೦ ಡ್ಯೂರೋ ಸಿಲಿಂಡರ್ ನೆರವನ್ನು ಒದಗಿಸುವಂತೆ ಸಂಸದರು ಸೂಚಿಸದರು.
ಸಂಸದರು ಸೂಚಿಸಿದ ಕಾರ್ಯಗಳಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಸಭೆಯಲ್ಲಿ ಹಾಜರಿದ್ದ ಎಲ್ಲಾ ಸಂಸ್ಥೆಗಳು ಪ್ರತಿನಿಧಿಗಳು ಒಪ್ಪಿಕೊಂಡು, ಜಿಲ್ಲಾಡಳಿತಕ್ಕೆ ಅಗತ್ಯ ನೆರವಿನ ಹಸ್ತ ಚಾಚುವುದಾಗಿ ತಿಳಿಸಿದರು.
ನೆರವು ನೀಡುವ ಸಂಸ್ಥೆಗಳು ವೈದ್ಯಕೀಯ ಮೂಲಸೌಕರ್ಯವನ್ನು ಒದಗಿಸುವ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರೊಂದಿಗೆ ಸಮನ್ವಯ ಸಾಧಿಸಿ ತುರ್ತಾಗಿ ಕ್ರಮ ಕೈಗೊಂಡು ಮೂರು ದಿನಗಳೊಳಗೆ ಕಾರ್ಯಾದೇಶ ನೀಡಿ ಜಿಲ್ಲಾಧಿಕಾರಿಯವರ ಕಛೇರಿಗೆ ಮಾಹಿತಿ ನೀಡಲು ಸೂಚಿಸಲಾಯಿತು.
ಜಿಲ್ಲಾದಿಕಾರಿ ಡಾ.ರಾಜೇಂದ್ರ ಕೆ.ವಿ, ಮಾತನಾಡಿ, ಜಿಲ್ಲೆಯಲ್ಲಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆ , ೪ ತಾಲೂಕು ಆಸ್ಪತ್ರೆಗಳು ಅಲ್ಲದೇ ಖಾಸಗಿ ಅಸ್ಪತ್ರೆಗಳಲ್ಲಿ ಶೇ. ೫೦ ರಷ್ಟು ಬೆಡ್ ಗಳನ್ನು ಜಿಲ್ಲಾಡಳಿತಕ್ಕೆ ಮೀಸಲಿಡಲಾಗಿದೆ ಎಂದ ಅವರು ಒಟ್ಟು ೪೮೧೬ ಬೆಡ್ ಗಳಿದ್ದು, ಅವುಗಳಲ್ಲಿ ೮೩೭ ಬೆಡ್ ಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ೩೯೭೯ ಬೆಡ್ ಗಳು ಖಾಲಿ ಉಳಿದಿವೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಶಾಸಕ ರಾಜೇಶ್ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

ವಧು-ವರನಿಗೆ ಹೆಗ್ಗಡೆಯವರು ಉಡುಗೊರೆ ನೀಡಿ ಆಶೀರ್ವದಿಸಿದರು. ಧರ್ಮಸ್ಥಳ ದೇವಸ್ಥಾನದ ಸಿಬ್ಬಂದಿಯಾದ ಪುದುವೆಟ್ಟು ಗ್ರಾಮದ ನಿವಾಸಿ ಚಿ. ಹರಿಕೃಷ್ಣ ಎಂಬ ವರನು ಧರ್ಮಸ್ಥಳದ ನಿವಾಸಿ ಚಿ.ಸೌ. ಅರ್ಪಿತಾ ಎಂಬ ವಧುವನ್ನು ಇಂದು ಗುರುವಾರ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಲಿದ್ದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬೀಡಿನಲ್ಲಿ ವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ರವಿಕೆಕಣ, ಮಂಗಲ ಸೂತ್ರ ಮತ್ತು ಉಡುಗೊರೆಯನ್ನು ನೀಡಿ ಆಶೀರ್ವದಿಸಿದರು. ವಧುವಿನ ತಾಯಿ ಮತ್ತು ತಂದೆ ಕೂಡಾ ದೇವಸ್ಥಾನದ ಸಿಬ್ಬಂದಿಯಾಗಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿಯವರ ಆಪ್ತ ಕಾರ್ಯದರ್ಶಿಯವರಾದ ಎ.ವಿ. ಶೆಟ್ಟಿಯವರು ತಿಳಿಸಿರುತ್ತಾರೆ.

ಸಾಮಾಜಿಕ ಕಾಳಜಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್ ಹುದ್ದಾರ್ ಬೈಕ್ ಅಪಘಾತದಲ್ಲಿ ನಿಧನ
ಪುತ್ತೂರು, ಎ.೨೯- ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಆರಂಭಿಸಿ ಪ್ರಸ್ತುತ ಮಂಗಳೂರಿನ ಜಿಲ್ಲಾ ಕ್ಷಯ ರೋಗ ನಿಯಂತ್ರಣ ವಿಭಾಗದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ್ ಹುದ್ದಾರ್ ಬುಧವಾರ ಮುಂಜಾನೆ ಮಾಣಿ ಎಂಬಲ್ಲಿ ನಡೆದ ಬೈಕ್ ಅಪಘಾತದಲ್ಲಿ ನಿಧನರಾದರು.
ಮೂಲತಾ ಧಾರವಾಡ ಜಿಲ್ಲೆಯವರಾದ ವೆಂಕಟೇಶ್ ಪುತ್ತೂರಿನ ಮುಂಡೂರಿನಲ್ಲಿ ವಾಸ್ತವ್ಯವಿದ್ದರು. ೧೯೯೮ರಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಆರಂಭಿಸಿದ ಅವರು ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪದೋನ್ನತಿ ಪಡೆದು ಮಂಗಳೂರು ಜಿಲ್ಲಾ ಕ್ಷಯರೋಗ ನಿಯಂತ್ರಣ ವಿಭಾಗದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಪ್ರತೀ ದಿನ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಅವರು ಮಂಗಳವಾರ ಬೈಕ್‌ನಲ್ಲಿ ಪುತ್ತೂರಿಗೆ ಬರುತ್ತಿದ್ದಾಗ ಮಾಣಿ ಸಮೀಪ ಅವರ ಬೈಕ್ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಿಗ್ಗೆ ಅವರು ನಿಧನವಾದರು. ಕ್ರೀಯಾಶೀಲ ವ್ಯಕ್ತಿತ್ವದ ವೆಂಕಟೇಶ್ ಹುದ್ದಾರ್ ಸಾಮಾಜಿಕ ಕಳಕಳಿ ಇದ್ದ ವ್ಯಕ್ತಿಯಾಗಿದ್ದು, ಕ್ಷಯರೋಗ, ಮಲೇರಿಯಾ, ಡೆಂಗ್ಯು ಜ್ವರ ಹಾಗೂ ಸೊಳ್ಳೆ ನಿರ್ಮೂಲನಾ ಕಾರ್ಯಕ್ಕೆ ಸಂಬಂಧಿಸಿ ಜನತೆಯಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾಯಕ ನಡೆಸಿದ್ದರು.