ಕೊರೋನಾ‌ ಮುನ್ನೆಚ್ಚರಿಕೆ ವಹಿಸಿ: ಪ್ರಧಾನ ಜಿಲ್ಲಾ ನ್ಯಾಯಾಧೀಶರ ಮನವಿ

ಕಲಬುರಗಿ.ಏ.29: ಜಿಲ್ಲೆಯಲ್ಲಿ ಕೋವಿಡ್ ಎರಡನೇ‌ ಅಲೇ ವ್ಯಾಪಕವಾಗಿ ಹರಡುತ್ತಿರುವ ಕಾರಣ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ‌ ಮತ್ತು ಸೌಲಭ್ಯ ನೀಡುವುದೇ ದೊಡ್ಡ ಸವಾಲಿನ‌ ಕೆಲಸವಾಗಿದೆ. ಹೀಗಾಗಿ ಸಾರ್ವಜನಿಕರು ಅನಗತ್ಯ ಮನೆಯಿಂದ ಹೊರಗಡೆ‌ ಬಾರದೆ ಮನೆಯಲ್ಲಿಯೆ ಸುರಕ್ಷಿತವಾಗಿರಿ ಎಂದು ಕಲಬುರಗಿ ಜಿಲ್ಲಾ ಪ್ರಧಾನ‌ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಸುಬ್ರಮಣ್ಯ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಕೋವಿಡ್ ಸೋಂಕಿನ ಸರಪಳಿಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮನೆಯಲ್ಲಿದ್ದು ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ರಕ್ಷಿಸುವುದು ಇಂದು ತುಂಬಾ ಅವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರು ತಿಳಿಸಿದ್ದಾರೆ.

ಮಾಸ್ಕ್ ಧರಿಸುವಿಕೆ, ಹ್ಯಾಂಡ್ ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ‌ ಪಾರಿಪಾಲನೆ ಸೇರಿದಂತೆ ಕೊರೋನಾ‌ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಸೂಚಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಮೇ-1 ರಿಂದ‌ 18 ವರ್ಷ ಮೇಲ್ಪಟ್ಟವರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದ್ಸು, ಎಲ್ಲಾ ಅರ್ಹರು ಹೆಸರು ನೊಂದಾಯಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.