ಕೊರೋನಾ ಚೇತರಿಸಿಕೊಳ್ಳುತ್ತಿದ್ದೇನೆ : ಎಚ್ಡಿಕೆ

ಬೆಂಗಳೂರು,ಏ.17- ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಹೇಳಿದ್ದಾರೆ.

ಎರಡನೇ ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬನ್ನೇರುಘಟ್ಟ ರಸ್ತೆ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ‌ಪಡೆಯಲು ನಿರ್ಧರಿಸಿ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ

ಈ ಸಂಬಂದ ಟ್ವೀಟ್ ಮಾಡಿರುವ ಅವರು
ನ್ಯಾಯಾಲಯದ ಪ್ರಕರಣವೊಂದರ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಗಿ ಆಗಬೇಕಾಗಿದ್ದರಿಂದ ಮಧ್ಯಾಹ್ನ ನಂತರ ಅಪೋಲೋ ಆಸ್ಪತ್ರೆಗೆ ದಾಖಲಾದೆ ಎಂದು ಹೇಳಿದ್ದಾರೆ.

ಬೆಳಿಗ್ಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಜಯದೇವ ಹೃದ್ರೋಗ ಆಸ್ಪತ್ರೆ ಯ ಮುಖ್ಯಸ್ಥ ಡಾ ಮಂಜುನಾಥ್ ಹಾಗೂ ಸಚಿವ ಡಾ ಸುಧಾಕರ್ ಮಣಿಪಾಲ್ ಆಸ್ಪತ್ರೆಯಲ್ಲಿ ‌ಹಾಸಿಗೆ ವ್ಯವಸ್ಥೆ ಕಾಯ್ದಿರಿಸಿದ್ದರು ಎಂದು ಹೇಳಿದ್ದಾರೆ

ತುರ್ತಾಗಿ ಸ್ಪಂದಿಸಿ ನನ್ನೊಂದಿಗೆ ಮಾತನಾಡಿದರು. ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಎಲ್ಲರಿಗೂ ನನ್ನ ಪ್ರಣಾಮಗಳು ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.