ಕೊರೋನಾ: ಜ.11 ಸಿಎಂಗಳೊಂದಿಗೆ ಪ್ರಧಾನಿ ಸಭೆ

ನವದೆಹಲಿ, ಜ.8- ಕೊರೊನಾ ಸೋಂಕಿಗೆ ಲಸಿಕೆಯ ತುರ್ತು ಬಳಕೆಗೆ ಅನುಮತಿಗೆ ನೀಡಿರುವ ಹಿನ್ನಲೆಯಲ್ಲಿ ಜನವರಿ 11 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.

ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಗಳೊಂದಿಗೆ ಅಂದು ಸಂಜೆ 4 ಗಂಟೆಗೆ ಸಭೆ ನಡೆಯಲಿದೆ.

ಆ ಸಭೆಯಲ್ಲಿ ದೇಶದಲ್ಲಿ ಕೊರೋನೋ ಸೋಂಕಿಗೆ ಲಸಿಕೆ ಹಾಕುವ ದಿನಾಂಕವನ್ನು ನಿಗದಿ ಮಾಡುವ ಸಾಧ್ಯತೆಗಳು ದಟ್ಟವಾಗಿವೆ.

ಈಗಾಗಲೇ ಭಾರತೀಯ ಔಷಧ ನಿಯಂತ್ರಕ -ಡಿಸಿಜಿಐ ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಝೆನೆಕಾ ಸಂಸ್ಥೆಯ ಅಭಿವೃದ್ಧಿಪಡಿಸಿರುವ “ಕೋವಿಶೀಲ್ಡ್” ಮತ್ತು ಹೈದರಾಬಾದ್ ಮೂಲದ ಮಾರುಕಟ್ಟೆ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ” ಕೋವಾಕ್ಸಿನ್ ಲಸಿಕೆಗೆ ಅನುಮತಿ ನೀಡಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೋಮವಾರದ ಸಭೆ ಮಹತ್ವ ಪಡೆದುಕೊಂಡಿದೆ