ಕೊರೋನಾ ತಡೆಗೆ ‘ಪಂಚ’ ಸೂತ್ರ: ರಾಜ್ಯಗಳಿಗೆ ಕೇಂದ್ರದ ಕಟ್ಟುನಿಟ್ಟಿನ ಸೂಚನೆ

ನವದೆಹಲಿ, ಮಾ.27- ದೇಶದಲ್ಲಿ ಕೊರೋನಾ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅದರ ತಡೆಗೆ “ಪಂಚ” ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಪರೀಕ್ಷೆ ಪ್ರಮಾಣ ಹೆಚ್ಚಳ, ಐಸೋಲೇಶನ್ ಮತ್ತು ಸೂಕ್ತ ಚಿಕಿತ್ಸೆ, ಮರು ತನಿಖೆ, ಸೂಕ್ತ ವರ್ತನೆ ಪಾಲನೆ, ಹಾಗು ಲಸಿಕೆ ಪ್ರಮಾಣ ಹೆಚ್ಷಳ ಮಾಡುವಂತೆ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ನೇತೃತ್ವದಲ್ಲಿ ನಡೆದ 12 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು 46 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆ ಆಯುಕ್ತರ ಜತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರ, ಗುಜರಾತ್ ಪ್ರಯಾಣ ತಮಿಳುನಾಡು, ಛತ್ತೀಸಗಡ ಮಧ್ಯಪ್ರದೇಶ ದೆಹಲಿ ಕರ್ನಾಟಕ, ಜಮ್ಮುಕಾಶ್ಮೀರ ಬಿಹಾರ ಪಂಜಾಬ್ ಸೇರಿದಂತೆ 12 ರಾಜ್ಯಗಳ ಮಹಾನಗರ ಪಾಲಿಕೆ ಆಯುಕ್ತರು ಮತ್ತು 46 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಕೊನೆಯ ತನಕ ಕಟ್ಟುನಿಟ್ಟಾಗಿ ಪಂಚಸೂತ್ರಗಳು ಪಾಲಿಸಬೇಕು ಎಂದು ಅವರ ನಿರ್ದೇಶನ ನೀಡಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ಪ್ರಮಾಣ ದಿನನಿತ್ಯ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯ ಪ್ರಮಾಣವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಗಣನೀಯವಾಗಿ ಹೆಚ್ಚಳ ಮಾಡುವ ಅಗತ್ಯತೆಯಿದೆ ಈ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಸೋಂಕುದೃಢ ಪಟ್ಟ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಜತೆಗೆ ಅವರ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನು ಪತ್ತೆಹಚ್ಚಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ.

ದೇಶದಲ್ಲಿ ಕೊರೋನಾ ಸೋಂಕು ಪ್ರಮಾಣ ನಿತ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಜೊತೆಗೆ ಸೂಕ್ತ ವರ್ತನೆ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ..

ದೇಶದಲ್ಲಿ ಕೊರೊನಾ ಸೋಂಕಿಗೆ ಲಸಿಕೆ ನೀಡಿಕೆ ಪ್ರಮಾಣವನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮತ್ತು ಹೆಚ್ಚು ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ