ಕೊರೋನಾ ನಿರ್ವಹಣೆಯಲ್ಲಿ ಮೋದಿಯೇ ಅತ್ಯುತ್ತಮವೆಂದು ಜನರ ಮನ್ನಣೆ: ಕಾಂಗ್ರೆಸ್ ಹುಸಿ ಟೀಕೆಗೆ: ಅಷ್ಠಗಿ ಆಕ್ರೋಶ

ಕಲಬುರಗಿ ಜೂ. 2- ಕೊರೋನಾ ನಿರ್ವಹಣೆಗಾಗಿ ಹತ್ತಾರು ದಿಟ್ಟ ಕ್ರಮ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಯವರು ಇಂದಿಗೂ ರಾಷ್ಟ್ರದ ಜನರ ಅಚ್ಚುಮೆಚ್ಚಿನ ನಾಯಕರಾಗಿ ಹೊರಹೊಮ್ಮಿರುವುದು ಎಬಿಪಿ-ಸಿ ವೋಟರ್ಸ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ ಹರ್ಷ ವ್ಯಕ್ತಪಡಿಸುತ್ತಾ, ವಿನಾ ಕಾರಣ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹುಸಿ ಟೀಕೆಗಳನ್ನು ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ಸಮಯಕ್ಕೆ ಸರಿಯಾಗಿ ಲಾಕ್ ಡೌನ್ ಜಾರಿ, ದೇಶದ ಜನರಿಗೆ ಉಚಿತವಾಗಿ ಆಹಾರ ಧಾನ್ಯ, ವಿಶೇಷ ಪ್ಯಾಕೇಜ್, ಲಸಿಕೆ ಅಭಿಯಾನ ಹಾಗೂ ಉತ್ಪಾದನೆ- ಜನರ ಸಂಕಷ್ಟಕ್ಕೆ ಪರಿಹಾರ ಸೂತ್ರಗಳು ಪ್ರಧಾನಿ ಮೋದಿ ಮೇಲೆ ಜನರು ಇಟ್ಟಿರುವ ವಿಶ್ವಾಸ ಮತ್ತು ನಂಬಿಕೆ ಇಮ್ಮಡಿಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಕೊರೋನಾ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಶೇ.63 ಜನ ಹೇಳಿದ್ದಾರೆ. ಒಂದು ವೇಳೆ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಿದ್ದಿದ್ದರೆ ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು ಎಂದು ಶೇ.22 ಜನ ಅಭಿಪ್ರಾಯಪಟ್ಟಿದ್ದಾರೆ.
ಇದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಮತ್ತು ಕೋವಿಡ -19 ಉತ್ತಮ ನಿರ್ವಹಣೆ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದೆ.
ಮೋದಿ ಸರ್ಕಾರಕ್ಕೆ 7 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಸಮೀಕ್ಷೆ ನಡೆಸಲಾಗಿದೆ ಎಂದು ಅಷ್ಠಗಿ ಹೇಳಿದ್ದಾರೆ. ಈಗಲೂ ಜನತೆ ಕೊರೋನಾ ನಿರ್ವಹಣೆ ವಿಚಾರದಲ್ಲಿ ಮೋದಿ ಯವರ ಕೆಲಸದ ಬಗ್ಗೆ ತೃಪ್ತಿ ಹೊಂದಿದ್ದಾರೆ. ಈ ಮೂಲಕ ನಾವು ಅಧಿಕಾರದಲ್ಲಿ ಇದ್ದಿದ್ದರೆ ಉತ್ತಮವಾಗಿ ಕೆಲಸ ಮಾಡುತ್ತಿದ್ದೆವು ಎಂಬ ಕಾಂಗ್ರೆಸ್ ಪಕ್ಷದ ಟೀಕೆಯನ್ನು ಈ ಸಮೀಕ್ಷೆ ಸಾರಾಸಗಟಾಗಿ ತಳ್ಳಿಹಾಕಿದೆ ಎಂದು ಅಂಬಾರಾಯ ಅಷ್ಠಗಿ ಕಾಂಗ್ರೆಸ್ ಪಕ್ಷದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದಾರೆ.