ಕೊರೋನಾ ಮುಕ್ತ ಜಿಲ್ಲೆಯನ್ನಾಗಿ ಮಾಡಿ – ದುರುಗೇಶ


ರಾಯಚೂರು, ಜೂ.೧- ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ವೈದ್ಯರು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ದುರುಗೇಶ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಸ್ಪತ್ರೆ ಹಾಸಿಗೆ ನಿರ್ವಹಣಾ ತರಬೇತಿ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಕೋವಿಡ್ ಪ್ರಕರಣ ನಿಯಂತ್ರಣವಾಗುತ್ತಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗಿ ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡಬೆಕು ಎಂದರು. ನಮ್ಮ ಮನೆಯಲ್ಲಿ ೭ ಜನರಿಗೆ ಕೋವಿಡ್ ದೃಢಪಟ್ಟಿದ್ದು ಆದರೆ ಯಾರೂ ಕೂಡ ಭಯಪಡದೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಯಾರಿಗೆ ಆಗಲಿ ಸೋಂಕು ದೃಢಪಟ್ಟರು ಧೈರ್ಯದಿಂದ ಆತ್ಮವಿಶ್ವಾಸ ಹಿಟ್ಟು ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಕೊರೋನ ಸೋಂಕಿತರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ನೋಡಲ್ ಅಧಿಕಾರಿಗಳ ಜವಾಬ್ದಾರಿ ದೊಡ್ಡದು. ಅವರು ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ಕೋವಿಡ್ ಸೆಂಟರ್ ಗಳಿಗೆ ಹೋಗಲು ಭಯಪಡಬಾರದು. ಸೋಂಕಿತರ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು. ಸರ್ಕಾರದ ಮಾರ್ಗಸೂಚಿ ಯಂತೆ ಕೆಲಸ ಮಾಡಬೇಕು ಎಂದರು.
ಆರೋಗ್ಯ ಅಧಿಕಾರಿಗಳು, ತಹಶಿಲ್ದಾರ್, ತಾಲ್ಲೂಕು ಪಂಚಾಯಿತಿ ಇಒ, ಮಾರ್ಚ್ ೨೪ ರಿಂದ ಇಲ್ಲಿ ಯವರೆಗೆ ಗ್ರಾಮ ಪಂಚಾಯತಿ ಗಳ ಟಾಸ್ಜ್ ಫೋರ್ಸ್ ಸಮಿತಿ ಸಭೆ ನಡೆಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ, ಡಾ. ಸುರೇಂದ್ರಬಾಬು, ಐಎಮ್‌ಎ ಕಾರ್ಯದರ್ಶಿ ಡಾ.ನಾಗರಾಜ ಬಾಲ್ಕಿ ಸೇರಿದಂತೆ ನೋಡಲ್ ಅಧಿಕಾರಿಗಳು ಇದ್ದರು.