ಕೊರೋನಾ ರೋಗಿಗಳಿರುವ ಸೀಯೋನ್ ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಬೆಳ್ತಂಗಡಿ, ಜೂ.೩- ಸಿಯೋನ್ ಆಶ್ರಮದಲ್ಲಿನ ಕೊರೋನಾ ರೋಗಿಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಲಾಗುತ್ತಿದ್ದು ಕೇಂದ್ರಕ್ಕೆ ಹಾಗೂ ರೋಗಿಗಳ ಚಿಕಿತ್ಸೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರಗಳನ್ನು ನೀಡುವುದಾಗಿ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ತಿಳಿಸಿ ದರು. ನೆರಿಯದ ಸೀಯೋನ್ ಆಶ್ರಮಕ್ಕೆ ಭೇಟಿ ನೀಡಿ ಅಲ್ಲಿ ಸ್ಥಿತಿಗತಿಗಳನ್ನು ಪರಿಶೀಲಿಸಿ ಬಳಿಕ  ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇಲ್ಲಿನ ಪ್ರಕರಣಗಳನ್ನು ಪರಿಶೀಲಿಸಲಾಗಿದ್ದು ೧೨೯  ಮಂದಿ ಸೋಂಕಿತರನ್ನು  ಧರ್ಮಸ್ಥಳ ರಜತಾದ್ರಿಯ ಕೋವಿಡ್ ಕೇರ್ ಸೆಂಟರಿಗೆ ವರ್ಗಾಯಿಸಲಾಗಿದೆ. ಅಲ್ಲಿ ಅವರಿಗೆ ಎಲ್ಲ ವ್ಯವಸ್ಥೆ ಗಳನ್ನು ಮಾಡಲಾಗಿದೆ. ಆಶ್ರಮದ ಸ್ಥಿತಿಗತಿಗಳನ್ನು ಗಮನಿಸಲಾಗುತ್ತಿದೆ ಎಂದರು. 

ಬಾಂಜಾರು ಮಲೆಪ್ರದೇಶದಲ್ಲಿ ಈವರೆಗೆ ಯಾವುದೇ ಕೋವಿಡ್ ಪ್ರಕರಣಗಳು ದಾಖಲಾ ಗಿಲ್ಲ. ಅವರಿಗೆ ವ್ಯಾಕ್ಸಿನೇಷನ್ ಗೆ ಅಲ್ಲಿಯೇ ವ್ಯವಸ್ಥೆ ಮಾಡಲು ಈಗಾಗಲೆ ತಾಲೂಕು ಆರೋಗ್ಯಾಧಿಕಾರಿಯವರಿಗೆ ಸೂಚನೆ ನೀಡಲಾಗಿದೆ. ಅವರು ವ್ಯಾಕ್ಸಿನೇಷನ್ ಗಾಗಿ ಆಸ್ಪತ್ರೆಗಳಿಗೆ ಬಂದು ಅವರಿಗೆ ತೊಂದರೆಯಾಗುವುದು ಬೇಡ ಎಂದು ಈ ಕ್ರಮವನ್ನು ಕೈಗೊಳ್ಳಲಾಗಿದೆ. ಅದೇ ರೀತಿ ಎಳೆ ನೀರು ಪ್ರದೇಶದಲ್ಲಿಯೂ ಅಲ್ಲಿಗೆ ತೆರಳಿ ವ್ಯಾಕ್ಸಿನೇಷನ್ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕೊರೋನಾ ಸೋಂಕಿತರು ಮನೆಯಲ್ಲಿರುವುದಕ್ಕಿಂತ ಕೋವಿಡ್ ಕೇರ್ ಸೆಂಟರ್‌ನಲ್ಲಿದ್ದರೆ ಉತ್ತಮ. ಈಗಾಗಲೆ ಉತ್ತಮ ಗುಣಮಟ್ಟದ ಕೋವಿಡ್ ಕೇರ್ ಸೆಂಟರ್ ಗಳನ್ನು ತಾಲೂಕಿನಲ್ಲಿ ತೆರೆಯಲಾಗಿದೆ ಅವುಗಳನ್ನು ಪರಿಶೀಲಿಸಲಾಗಿದ್ದು ಎಲ್ಲ ವ್ಯವಸ್ಥೆ ಗಳೂ ಉತ್ತಮವಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಅವರು ಕೋವಿಡ್ಚಕೇರ್ ಸೆಂಟರಿಗೆ ಬರಲೇ ಬೇಕು. ಅಲ್ಲಿದ್ದರೆ ಸರಕಾರ ನಿಮ್ಮ ಯೋಗಕ್ಷೇಮವನ್ನು ನೋಡಿಕೊಳ್ಳಲು ಸಾಧ್ಯವಾಗುತ್ತದೆ ಅಗತ್ಯ ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಿಸಲು ಉತ್ತಮ ಚಿಕಿತ್ಯ ನೀಡಲು ಇದು ಸಹಕಾರಿಯಾಗುತ್ತದೆ ಎಂದರು.

ಈಗವಿರುವ ಲಾಕ್ಡೌನ್ ಮಾನದಂಡಗಳನ್ನು ಸಮರ್ಪಕವಾಗಿ ಪಾಲಿಸಿದರೆ ಕೊರೋನಾ ಹರಡುವಿಕೆಯನ್ನು ತಡೆಯಲು ಸಾಧ್ಯವಿದೆ. ಅನಗತ್ಯವಾಗಿ ತಿರುಗಾಡುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲರೂ ಕಾನೂನನ್ನು ಪಾಲಿಸಿದರೆ ಕೆಲವೇ ದಿನಗಳಲ್ಲಿ ಕೊರೋನಾ ಕಡಿಮೆಯಾಗಲಿದ್ದು ಆಗ ಲಾಕ್ಡೌನ್ ಅನ್ನು ಸಡಿಲಿಸಲು ಸಾಧ್ಯವಾಗುತ್ತದೆ ಎಂದರು

ಜಿಲ್ಲೆಯಲ್ಲಿ ಮುಂದಿನ ಎರಡು ತಿಂಗಳಲ್ಲಿ ಎಲ್ಲರಿಗೂ ವ್ಯಾಕ್ಸಿನೇಷನ್ ಮಾಉವ ಗುರಿಯೊಂದಿಗೆ ಕಾರ್ಯ ಯೋಜನೆಯನ್ನು ರೂಪಿಸಲಾಗಿದೆ. ಗ್ರಾಮೀಣ ಪ್ರದೇಶದ ಜನರೂ ವ್ಯಾಕ್ಸಿನೇಷನ್ ಗೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಗ್ರಾಮ ಪಂಚಾಯತುಗಳ ಸಹಕಾರದಲ್ಲಿ ವ್ಯಾಕ್ಸಿನೇಷನ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಮಳೆಗಾಲ ಪೂರ್ವ ಸಿದ್ದತೆಗಳನ್ನು ಸಮರ್ಪಕವಾಗಿ ಮಾಡುವಂತೆ ತಾಲೂಕು ಆಡಳಿತಕ್ಕೆ ಸೂಚನೆ ನೀಡಲಾಗಿದೆ. ಕಿಂಡಿ ಅಣೆಕಟ್ಟುಗಳಲ್ಲಿ ತುಂಬಿರುವ ಹೂಳನ್ನು ತೆಗೆಯುವ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ದಿಡುಪೆ ಚಾರ್ಮಾಡಿ ಪ್ರದೇಶಗಳಲಿ ಭೂಕುಸಿತದಂತಹ ಅಪಾಯಗಳು ಸಂಭವಿಸಿದರೆ ಅದನ್ನು ಎದುರಿಸಲು ಎಲ್ಲ ರೀತಿಯ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಯವರು. ಮೊದಲು ಧರ್ಮಸ್ಥಳದ ರಜತಾದ್ರಿಯಲ್ಲಿರುವ ಕೋರಂಟೈನ್ ಸೆಂಟರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿನ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ನೆರಿಯ ಸೀಯೋನ್ ಆಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ಆಡಳಿತಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡ್‌ಗೆ ತರಳಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾಧಿಕಾರಿಯವರು ಆಸ್ಪತ್ರೆಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸುವಂತೆ ಸೂಚಿಸಿದರು. ಶಾಸಕ ಹರೀಶ್ವಪೂಂಜ ಅವರು ಜಿಲ್ಲಾಧಿಕಾರಿ ಯವರೊಂದಿಗಿದ್ದು ಅಗತ್ಯ ಮಾರ್ಗದರ್ಶನ ನೀಡಿದರು.

ದ.ಕ.ಜಿ.ಪಂ.ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ. ಕುಮಾರ್, ಬೆಳ್ತಂಗಡಿಯ  ಕೋವಿಡ್-೧೯ ನೋಡೆಲ್ ಅಧಿಕಾರಿ ವೆಂಕಟೇಶ್,  ತಹಸೀಲ್ದಾರ್ ಮಹೇಶ್ ಜೆ., ತಾ.ಪಂ ಕಾರ್ಯನಿರ್ವಹಣಾಧಿಕಾರಿ  ಕುಸುಮಾಧರ್, ಪ್ಲಾಯಿಂಗ್ ಸ್ಕಾಡ್ ಅಧಿಕಾರಿ ಶಿವಪ್ರಸಾದ್ ಅಜಿಲ, ತಾಲೂಕು ವೈದಾಧಿಕಾರಿ ಡಾ. ಕಲಾಮಧು, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಸಿಡಿಪಿಒ ಪ್ರಿಯಾ ಆಗ್ನೇಸ್, ರಜತಾದ್ರಿ ಕೋವಿಡ್ ಸೆಂಟರ್ ನೋಡೆಲ್ ಅಧಿಕಾರಿ ಡಾ.ಜಯಕೀರ್ತಿ ಜೈನ್, ಧರ್ಮಸ್ಥಳ ಗ್ರಾಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕ  ವಿವೇಕ್ ವಿ.ಪಾಯಸ್,  ವಿಪತ್ತು ನಿರ್ವಹಣ ಘಟಕ ಯೋಜನಾಧಿಕಾರಿ ಯಶವಂತ ಪಟಗಾರ್, ಹಾಗೂ ಇತರರು ಇದ್ದರು. ಜಿಲ್ಲಾಧಿಕಾರಿಯವರು

ಪೊಸೊಳಿಕೆಯ ಹೋಂ ಐಸೊಲೇಶನ್ ನಲ್ಲಿರುವ ಮನೆಯೊಂದಕ್ಕೆ ತೆರಳಿ ಅವರಿಂದ ಮಾಹಿತಿ ಪಡೆದುಕೊಂಡರು. ಆಶಾಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆ ಯರೊಂದಿಗೂ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡರು.