ಕೊರೋನಾ ಲಸಿಕೆ ನೊಂದಣಿ ಅಭಿಯಾನ

ಬಾಗಲಕೋಟೆ ಮಾ 22 : ಕರ್ನಾಟಕ ಬಿಜೆಪಿಯ ಸಾಮಾಜಿಕ ಜಾಲತಾಣ ಪ್ರಕೋಷ್ಠ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿರುವ ಕೊರೋನಾ ಲಸಿಕೆ ಫಲಾನುಭವಿಗಳ ನೊಂದಣಿ ಅಬಿಯಾನ ನಗರದಲ್ಲಿ ಆರಂಭಗೊಂಡಿತು.
ಬಿ.ಜೆ.ಪಿ.ಯ ವಿಜಯಪುರ ಜಿಲ್ಲೆಯ ಪ್ರಭಾರಿ ಹಾಗೂ ಮಾಜಿ ಶಾಸಕ ಪಿ.ಎಚ್.ಪೂಜಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಜಿಲ್ಲಾ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಪಂಕಜ್ ನಿಕ್ಕಂ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಪಿ.ಎಚ್.ಪೂಜಾರ ಅವರು, 45 ವರ್ಷ ಮೇಲ್ಪಟ್ಟವರು ಈ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಸ್ವಯಂ ಪ್ರೇರಣೆಯಿಂದ ಸರ್ಕಾರಿ ಆಸ್ಪತ್ರೆಗೆ ಜನ ಬಂದು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಇನ್ನೂ 60 ವರ್ಷ ಮೇಲ್ಪಟ್ಟವರನ್ನು ಆಸ್ಪತ್ರೆಗೆ ಕರೆ ತಂದು ಲಸಿಕೆಯನ್ನು ಹಾಕಿಸಬೇಕು ಎಂದರು.
ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ಜಿಲ್ಲಾ ಉಪಾಧ್ಯಕ್ಷ ರಾಜು ಮುದೇನೂರ, ನಗರ ಪ್ರಧಾನ ಕಾಯರ್ಹದರ್ಶಿ ಉಮೇಶ್ ಹಂಚಿನಾಳ, ಬಸವರಾಜ ಹುನಗುಂದ ,ಯುವ ಮೋರ್ಚಾ ಅಧ್ಯಕ್ಷ ಚಂದ್ರು ಸರೂರ, ಬಸವರಾಜ್ ಅಂಬಿಗೇರ, ಪ್ರದೀಪ್ ಗೌಡ ಇದ್ದರು.