ಕೊರೋನಾ ಸೋಂಕಿನಿಂದ ಇಬ್ಬರು ನಿಧನ:137 ಪಾಸಿಟಿವ್

ಕಲಬುರಗಿ.ಮಾ.31: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು ನಿಧನರಾಗಿದ್ದಾರೆ ಎಂದು ಬುಧವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ಸಾರಿ ಹಿನ್ನೆಲೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಹೈಕೋರ್ಟ್ ಎದುರುಗಡೆಯ ಅಕ್ಕಮಹಾದೇವಿ ಕಾಲೋನಿಯ 51 ವರ್ಷದ ಪುರುಷ ಮಾ.23 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ, ಮಾ.30 ರಂದು ನಿಧನ ಹೊಂದಿದ್ದಾರೆ.
ಅದೇ ರೀತಿ ಸಾರಿ ಹಿನ್ನೆಲೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಸೇಡಂ ಪಟ್ಟಣದ ಪಂಚಲಿಂಗೇಶ್ವರ ದೇವಸ್ಥಾನ ಬಳಿ ಪ್ರದೇಶದ 65 ವರ್ಷದ ವೃದ್ಧ ಮಾ.24 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಮಾ.28 ರಂದು ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 343 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 137 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 23969 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 47 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 22422 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. 1204 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.