ಕೊರೋನಾ ಸೋಂಕಿನಿಂದ ಇಬ್ಬರು ನಿಧನ:181 ಪಾಸಿಟಿವ್

ಕಲಬುರಗಿ.ಏ.5: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು ನಿಧನರಾಗಿದ್ದಾರೆ ಎಂದು ಸೋಮವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ಸಾರಿ ಹಿನ್ನೆಲೆವುಳ್ಳ ಕಲಬುರಗಿಯ ಸೂಪರ್ ಮಾರ್ಕೆಟ್ ಪ್ರದೇಶದ 55 ವರ್ಷದ ಪುರುಷ ಏ.1 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.2 ರಂದು ನಿಧನ ಹೊಂದಿದ್ದಾರೆ.
ಅದೇ ರೀತಿ ಸಾರಿ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ‌ ಚಿಂಚೋಳಿ ತಾಲೂಕಿನ ತೇಗಲತಿಪ್ಪಿ ಗ್ರಾಮದ 68 ವರ್ಷದ ವೃದ್ಧ ಮಾ.30 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ, ಏ.4 ರಂದು ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 351 ಜನ ನಿಧನರಾಗಿದ್ದಾರೆ
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 181 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 24720 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 121 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 22955 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.1414 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.