ಕೊರೋನಾ ಸೋಂಕಿನಿಂದ ಇಬ್ಬರು ನಿಧನ:205 ಪಾಸಿಟಿವ್

ಕಲಬುರಗಿ.ಏ.7: ಕೊರೋನಾ ಸೋಂಕಿನಿಂದ ಕಲಬುರಗಿ ನಗರದಲ್ಲಿ ಇಬ್ಬರು ನಿಧನರಾಗಿದ್ದಾರೆ ಎಂದು ಬುಧವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ಸಾರಿ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ ಮೋಮಿನಪುರ ಪ್ರದೇಶದ 75 ವರ್ಷದ ವೃದ್ಧೆ ಮಾ.29 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ, ಏ.6 ರಂದು ನಿಧನ ಹೊಂದಿದ್ದಾರೆ.
ಅದೇ ರೀತಿ ಸಾರಿ ಹಿನ್ನೆಲೆಯಿಂದ ಕಲಬುರಗಿಯ ಮಿಲ್ಲತ್ ನಗರದ 60 ವರ್ಷದ ವೃದ್ಧೆ ಏ.5 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.6 ರಂದು ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 355 ಜನ ನಿಧನರಾಗಿದ್ದಾರೆ
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 205 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 25186 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 135 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 23275 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.1556 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.