ಕೊರೋನಾ ಸೋಂಕಿನಿಂದ ಇಬ್ಬರು ನಿಧನ:276 ಪಾಸಿಟಿವ್

ಕಲಬುರಗಿ.ಏ.10: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು ನಿಧನರಾಗಿದ್ದಾರೆ ಎಂದು ಶನಿವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ‌ ನಗರದ ಆಳಂದ ಕಾಲೋನಿಯ 82 ವರ್ಷದ ವೃದ್ಧ ಏ.5 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.9 ರಂದು ನಿಧನ ಹೊಂದಿದ್ದಾರೆ.
ಅಲ್ಲದೆ‌ ಐ.ಎಲ್.ಐ. ಹಿನ್ನೆಲೆಯಿಂದ ಅಫಜಲಪೂರ ತಾಲೂಕಿನ ಉಡಚಣ‌ ಗ್ರಾಮದ 57 ವರ್ಷದ ಮಹಿಳೆ ಏ.5 ರಂದು ತಮ್ಮ‌ಮನೆಯಲ್ಲಿಯೆ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 362 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 276 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 25913 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 118 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 23629 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.1922 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.