ಕೊರೋನಾ ಸೋಂಕಿನಿಂದ ಇಬ್ಬರು ನಿಧನ:291 ಪಾಸಿಟಿವ್

ಕಲಬುರಗಿ.ಏ.11: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು ನಿಧನರಾಗಿದ್ದಾರೆ ಎಂದು ರವಿವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟ ತೊಂದರೆ ಸಮಸ್ಯೆಯಿಂದ‌ ಬಳಲುತ್ತಿದ್ದ ಕಲಬುರಗಿ ತಾಲೂಕಿನ ಗಣಜಲಖೇಡ್ ಗ್ರಾಮದ 75 ವರ್ಷದ ವೃದ್ಧ ಏ.9ರಂದು ತಮ್ಮ‌ಮನೆಯಲ್ಲಿಯೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡ, ಅಸ್ತಮಾ ಹಾಗೂ ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿ‌ ನಗರದ ಟಿಪ್ಪು ಸುಲ್ತಾನ ಚೌಕ್‌ ನಿವಾಸಿ 45 ವರ್ಷದ ಪುರುಷ ಏ.7 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ, ಏ.9 ರಂದು ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 364 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 291 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 26204 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 236 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 23865 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.1975 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.