ಕೊರೋನಾ ಸೋಂಕಿನಿಂದ ಏಳು ಜನ ನಿಧನ:818 ಪಾಸಿಟಿವ್

ಕಲಬುರಗಿ.ಏ.20: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ ಏಲು ಜನ ನಿಧನರಾಗಿದ್ದಾರೆ ಎಂದು ಮಂಗಳವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿ ಹೊರವಲಯದ ಡಬರಾಬಾದ್ (ಕೃಷ್ಣಾ ಕಾಲೋನಿ) ನಿವಾಸಿ 55 ವರ್ಷದ ಮಹಿಳೆ (ರೋಗಿ ಸಂ.1113831) ಏ.12 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.18ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯ 28 ವರ್ಷದ ಯುವಕ (ರೋಗಿ ಸಂ.1159909) ಏ.18 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಶಹಾಬಾದ ಪಟ್ಟಣದ ಮಖ್ಯ ರಸ್ತೆಯ‌ ನಿವಾಸಿ 64 ವರ್ಷದ ವೃದ್ಧ (ರೋಗಿ ಸಂ.1135249) ಏ.14 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.18ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಕಿಡ್ನಿ ಸಮಸ್ಯೆದಿಂದ ಬಳಲುತ್ತಿದ್ದ ಕಲಬುರಗಿ ನಗರದ‌ ಹಾಗರಗಾ ಕ್ರಾಸ್ ರೆಹಮಾನ‌ ಕಾಲೋನಿಯ 57 ವರ್ಷದ ಪುರುಷ (ರೋಗಿ ಸಂ.1119750) ಏ.13 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.18ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಆಳಂದ ಪಟ್ಟಣದ ಹತ್ತನಗಲ್ಲಿಯ‌ ನಿವಾಸಿ 60 ವರ್ಷದ ವೃದ್ಧ (ರೋಗಿ ಸಂ.1114498) ಏ.13 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.19ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅಫಜಲಪೂರ ತಾಲೂಕಿನ ಬಂದರವಾಡ ಗ್ರಾಮದ 85 ವರ್ಷದ ವೃದ್ಧ (ರೋಗಿ ಸಂ.1064396) ಏ.13 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.20ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ ಸೂಪರ ಮಾರ್ಕೆಟ್ ಗಾಜಿಪೂರ ಪ್ರದೇಶದ 74 ವರ್ಷದ ವೃದ್ಧ (ರೋಗಿ ಸಂ.1101024) ಏ.11 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.20ಕ್ಕೆ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 391 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 818 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 30879 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 167 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 25775 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.4713 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.