ಕೊರೋನಾ ಸೋಂಕಿನಿಂದ ಓರ್ವ ನಿಧನ:159 ಪಾಸಿಟಿವ್

ಕಲಬುರಗಿ.ಮಾ.28: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ನಿಧನರಾಗಿದ್ದಾರೆ ಎಂದು ರವಿವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ಸಾರಿ ಹಿನ್ನೆಲೆಯಿಂದ ಕಲಬುರಗಿಯ ಸಂತೋಷ ಕಾಲೋನಿ ( ದೇವಿ ನಗರ) ಪ್ರದೇಶದ ನಿವಾಸಿ 45 ವರ್ಷದ ಪುರುಷ ಮಾ.24 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ, ಮಾ.27 ರಂದು ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 340 ಜನ ನಿಧನರಾಗಿದ್ದಾರೆ
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 159 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 23558 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 32 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 22266 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.952 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.