ಕೊರೋನಾ ಸೋಂಕಿನಿಂದ ಕಲಬುರಗಿ ನಗರದ 5 ಜನ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ನಗರದ ಮತ್ತೆ ಐದು ಜನ ನಿಧನರಾಗಿರುವ ಬಗ್ಗೆ ಶನಿವಾರ ದೃಢವಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಇದೂವರೆಗೆ ಮೃತರಾದವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ ದರ್ಗಾ ಪ್ರದೇಶದ 40 ವರ್ಷದ ಮಹಿಳೆ (P-56982) ಜು.8 ರಂದು ಆಸ್ಪತ್ರೆಗೆ ದಾಖಲಾಗಿ ಜು.9 ರಂದು ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರಗಿ ನಗರದ ಆಳಂದ ರಸ್ತೆ ಪ್ರದೇಶದ 65 ವರ್ಷದ ವೃದ್ಧೆ (P-94963) ಜು.26 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿಯ ಸಮತಾ ಕಾಲೋನಿಯ 65 ವರ್ಷದ ವೃದ್ಧ (P- 100990) ಜು.26 ರಂದು ಆಸ್ಪತ್ರೆಗೆ ದಾಖಲಾಗಿ ಜು.31 ರಂದು ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರಗಿಯ ಸುಂದರ‌ ನಗರದ 36 ವರ್ಷದ ಪುರುಷ (P-102751) ಜು.26 ರಂದು ಆಸ್ಪತ್ರೆಗೆ ದಾಖಲಾಗಿ ಜು.30 ರಂದು ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಕಲಬುರಗಿ ನಗರದ ಗುಬ್ಬಿ ಕಾಲೋನಿಯ 59 ವರ್ಷದ ಪುರುಷ (P-129615) ಜು.30 ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.