ಕೊರೋನಾ ಸೋಂಕಿನಿಂದ ಕಲಬುರಗಿ ನಗರದ ಮೂವರು ನಿಧನ

ಕಲಬುರಗಿ.ಸೆ.12: ಕೊರೋನಾ ಸೋಂಕಿನಿಂದ ಕಲಬುರಗಿ ನಗರದ‌ ಮೂವರು ನಿಧನರಾಗಿರುವ ಬಗ್ಗೆ ಶನಿವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 242ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ತಿಳಿಸಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಪ್ರಗತಿ ಕಾಲೋನಿಯ 73 ವರ್ಷದ ವೃದ್ಧ (P-407655) ಸೆ.5 ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ನಿಧನರಾಗಿದ್ದಾರೆ.

ತೀವ್ರ ಉಸಿರಾಟ ತೊಂದರೆ ಮತ್ತು ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ ಪೊಲೀಸ್ ವಸತಿ ಗೃಹದ 56 ವರ್ಷದ ಪುರುಷ (P-444496) ಸೆ.10 ರಂದು ಆಸ್ಪತ್ರೆಗೆ ದಾಖಲಾಗಿ ಸೆ.11 ರಂದು ನಿಧನರಾಗಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರಗಿಯ ಪಿ & ಟಿ ಕಾಲೋನಿ ಹೌಸಿಂಗ್ ಬೋರ್ಡ್ ಪ್ರದೇಶದ 75 ವರ್ಷದ ವೃದ್ಧ (P-458637) ಸೆ.10 ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ನಿಧನರಾಗಿದ್ದಾರೆ.