ಕೊರೋನಾ ಸೋಂಕಿನಿಂದ ಜಿಲ್ಲೆಯ ಮತ್ತಿಬ್ಬರು ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತಿಬ್ಬರು ನಿಧನವಾಗಿರುವ ಬಗ್ಗೆ ಸೋಮವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 192ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಮಲಾಪುರ ತಾಲೂಕಿನ ಕೆರೆಅಂಬಲಗಾ ಗ್ರಾಮದ 65 ವರ್ಷದ ವೃದ್ಧ (P-209607) ಆ.16 ರಂದು ಆಸ್ಪತ್ರೆಗೆ ದಾಖಲಾಗಿ ಆ.18 ರಂದು ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಸೇವಾಲಾಲ ನಗರದ 58 ವರ್ಷದ ಮಹಿಳೆ (P-272435) ಆ.19 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.