ಕೊರೋನಾ ಸೋಂಕಿನಿಂದ ನಾಲ್ವರು ನಿಧನ:290 ಪಾಸಿಟಿವ್

ಕಲಬುರಗಿ:ಏ.13: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ನಾಲ್ವರು ನಿಧನರಾಗಿದ್ದಾರೆ ಎಂದು ಮಂಗಳವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟ ತೊಂದರೆ ಸಮಸ್ಯೆಯಿಂದ‌ ಬಳಲುತ್ತಿದ್ದ ಅಫಜಲಪೂರ ತಾಲೂಕಿನ ಬಂದರವಾಡ ಗ್ರಾಮದ 70 ವರ್ಷದ ವೃದ್ಧ ಏ.6 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.10 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡ ಹಾಗೂ ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿ‌ ನಗರದ ಉಮರ ಕಾಲೋನಿಯ 60 ವರ್ಷದ ವೃದ್ಧ ಏ.7 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.9 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ‌ ನಗರದ ಶಹಾಬಜಾರ ಪ್ರದೇಶದ 45 ವರ್ಷದ ಮಹಿಳೆ ಏ.9 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.10 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಆಳಂದ ತಾಲೂಕಿನ ದರ್ಗಶಿರೂರ ಗ್ರಾಮದ 45 ವರ್ಷದ ಪುರುಷ ಏ.9 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.10 ರಂದು ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 368 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 290 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 04 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 26829 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 249 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 24342 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.2199 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.