ಕೊರೋನಾ ಸೋಂಕಿನಿಂದ ಮತ್ತಿಬ್ಬರು ನಿಧನ:109 ಪಾಸಿಟಿವ್

ಕಲಬುರಗಿ.ಮಾ.26: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಮತ್ತಿಬ್ಬರು ಪುರುಷರು ನಿಧನರಾಗಿದ್ದಾರೆ ಎಂದು ಶುಕ್ರವಾರದ ಅರೋಗ್ಯ ಬುಲೆಟಿನ್ ಖಚಿತಪಡಿಸಿದೆ.
ಸಾರಿ ಹಿನ್ನೆಲೆ ಜೊತೆಗೆ ಮಧುಮೇಹ ಸಮಸ್ಯೆಯಿಂದ‌ ಬಳಲುತ್ತಿದ್ದ ಕಲಬುರಗಿಯ ಹಳೇ ಜೇವರ್ಗಿ ರಸ್ತೆಯ ರೆಹಮತ್ ನಗರದ 58 ವರ್ಷದ ವ್ಯಕ್ತಿ ಮಾ.14 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ, ಮಾ.25 ರಂದು ನಿಧನ ಹೊಂದಿದ್ದಾರೆ.
ಇನ್ನೂ ಆಳಂದ ಪಟ್ಟಣದ ಬಹಾರಪೇಟ್ ಪ್ರದೇಶದ 52 ವರ್ಷದ ಪುರುಷ ವ್ಯಕ್ತಿ ಸಾರಿ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆಯಿಂದ‌ ಬಳಲುತ್ತಿದ್ದ ಇವರು ಮಾ.18 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಮಾ.25 ರಂದು ನಿಧನ ಹೊಂದಿರುವ ಬಗ್ಗೆ ಬುಲೆಟಿನ್ ದೃಢಪಡಿಸಿದೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 337 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 109 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 23252 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 50 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 22173 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.742 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.