ಕೊರೋನಾ ಸೋಂಕಿನಿಂದ ಮಹಿಳೆ ನಿಧನ:624 ಪಾಸಿಟಿವ್

ಕಲಬುರಗಿ.ಏ.15: ಕೊರೋನಾ ಸೋಂಕಿನಿಂದ ಕಲಬುರಗಿ ನಗರದ 55 ವರ್ಷದ ಮಹಿಳೆ ನಿಧನರಾಗಿದ್ದಾರೆ ಎಂದು ಗುರುವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ನಗರದ ಬ್ರಹ್ಮಪುರ ಪ್ರದೇಶದ 55 ವರ್ಷದ ಮಹಿಳೆ ಏ.13 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.15 ರಂದು ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 372 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 624 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 27829 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 189 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 24791 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.2666 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.